ಮುಲ್ಕಿ: ಕಾರ್ನಾಡ್ ಬೈಪಾಸ್ ಮೂಲಕ ರಾಷ್ಟ್ರೀಯ ಹೆದ್ದಾರಿ 66 ರನ್ನು ಸಂಪರ್ಕಿಸುವ ರಸ್ತೆ , ಗುಂಡಿಗಳು ಬಿದ್ದು, ಸಂಚಾರ ದುಸ್ತರವಾಗಿ ಪರಿಣಮಿಸಿತ್ತು. ಅಲ್ಲದೇ ರಸ್ತೆ ಅವ್ಯವಸ್ಥೆಯಿಂದ ಅನೇಕ ಅಪಘಾತಗಳು ಸಂಭವಿಸಿದ್ದವು.. ಹಲವು ವರ್ಷಗಳಿಂದ ರಸ್ತೆ ತೀರಾ ಹದಗೆಟ್ಟಿದ್ದು ಅನೇಕ ಬಾರಿ ಸಂಬಂಧಪಟ್ಟ ಇಲಾಖೆಗೆ ಹಾಗೂ ಸ್ಥಳೀಯ ಶಾಸಕರಿಗೆ ಮನವಿ ಮಾಡಲಾಗಿತ್ತು. ಆದರೂ ಯಾರು ಸ್ಪಂದಿಸಿರಲಿಲ್ಲ.
ಇನ್ನು ರಸ್ತೆಗೆ ಹಾಕಿದ್ದ ಡಾಂಬಾರು ಕೂಡ ಮಳೆಗಾಲದಲ್ಲಿ ಕಿತ್ತು ಹೋಗಿ, ಸ್ಥಳೀಯರು ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡಿದ್ದರು.. ಹಾಗಾಗಿ ಈ ಕುರಿತು ನಿಮ್ಮ ಪಬ್ಲಿಕ್ ನೆಕ್ಸ್ಟ್ ಸುದ್ದಿ ಬಿತ್ತರಿಸುತ್ತಿದ್ದಂತೆ ಸಮಸ್ಯೆಯ ಗಂಭೀರತೆ ಬಗ್ಗೆ ಗಮನ ಹರಿಸಿದ ಲೋಕೋಪಯೋಗಿ ಇಲಾಖೆ ಇದೀಗ ರಸ್ತೆಗೆ ತಾತ್ಕಾಲಿಕ ತೇಪೆ ಕಾರ್ಯ ನಡೆಸುತ್ತಿದೆ..
ಇದರಿಂದ ವಾಹನ ಸವಾರರ ಸಂಚಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಹದೆಗಟ್ಟ ರಸ್ತೆಯನ್ನು ಕೂಡಲೇ ಸಂಪೂರ್ಣ ದುರಸ್ತಿ ಮಾಡಿ ಡಾಂಬರೀಕರಣ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
PublicNext
20/11/2024 06:43 pm