ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಪುಸ್ತಕ ಅಧ್ಯಯನದಿಂದ ಜ್ಞಾನ ವಿಸ್ತಾರ- ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ

ಕೊಡಗು: ಪುಸ್ತಕಗಳ ಅಧ್ಯಯನದಿಂದ ಜ್ಞಾನ ವಿಸ್ತಾರ ಹೆಚ್ಚಾಗಲಿದೆ. ಆದ್ದರಿಂದ ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.

ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಪ್ರಯುಕ್ತ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇತಿಹಾಸ ತಿಳಿಯಬೇಕಿದ್ದಲ್ಲಿ ಪುಸ್ತಕಗಳ ಅಧ್ಯಯನ ಅತ್ಯಗತ್ಯ. ರಾಜ್ಯ, ರಾಷ್ಟ್ರ, ಅಂತರ್‌ ರಾಷ್ಟ್ರೀಯ, ವಿಜ್ಞಾನ, ತಂತ್ರಜ್ಞಾನ, ಆಧುನಿಕತೆ ಹೀಗೆ ಪ್ರತಿಯೊಂದು ವಿಚಾರಗಳನ್ನು ತಿಳಿದುಕೊಳ್ಳುವಂತಾಗಲು ಪುಸ್ತಕಗಳ ಅಧ್ಯಯನ ಅತ್ಯಗತ್ಯ ಎಂದು ಹೇಳಿದರು.

ಯುವ ಜನರಲ್ಲಿ ಓದಿನ ಬಗ್ಗೆ ಹಂಬಲ ಇರಬೇಕು. ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ಲೈಬ್ರರಿ ಸಹ ಇದ್ದು, ಇವುಗಳನ್ನು ಬಳಸಿಕೊಳ್ಳಬೇಕು. ಪುಸ್ತಕ ಅಧ್ಯಯನ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಆರ್.ಐಶ್ವರ್ಯ ಸಲಹೆ ಮಾಡಿದರು.

Edited By : Ashok M
PublicNext

PublicNext

20/11/2024 07:58 pm

Cinque Terre

34.14 K

Cinque Terre

0

ಸಂಬಂಧಿತ ಸುದ್ದಿ