ವಿಜಯಪುರ: ಹಿಂದೂಗಳನ್ನೇ ಟಾರ್ಗೆಟ್ ಮಾಡಿಕೊಂಡು BPL ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ವಿಜಯಪುರ ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂಗಳ ರೇಶನ್ ಕಾರ್ಡ್ ರದ್ದು ಮಾಡಲಾಗ್ತಿದೆ. ಇದನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಧರಣಿ ಮಾಡ್ತೇವೆ. ಹಿಂದೂಗಳಿಗೆ ರೇಶನ್ ಕಾರ್ಡ್ ನಲ್ಲಿ ಅನ್ಯಾಯವಾಗಬಾರದು. ಕಾಂಗ್ರೆಸ್ ನವರು ಹಿಂದೂಗಳನ್ನೇ ಟಾರ್ಗೆಟ್ ಮಾಡ್ತಿದ್ದಾರೆ. ಯಾರಿಗೆ ಅನ್ಯಾಯವಾಗಿದೆ ಅವರ ಪರವಾಗಿ ಸದನದಲ್ಲಿ ಧ್ವನಿ ಎತ್ತುತ್ತೇವೆ ಎಂದರು.
PublicNext
20/11/2024 08:11 pm