ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಮಕ್ಕಳ ಮೇಲೆ ನಿಗಾ ವಹಿಸಿ - ಡಿ.ಸಿ ಲಕ್ಷ್ಮಿಪ್ರಿಯಾ

ಕಾರವಾರ:

ಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳ ಕುರಿತು ಅವರಲ್ಲಿನ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ದೌರ್ಜನ್ಯಗಳನ್ನು ತಡೆಯಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಬುಧವಾರ ನಡೆದ ಮಕ್ಕಳ ಸಂರಕ್ಷಣೆಯ ಬಗ್ಗೆ ಅಧಿಕಾರಿಗಳಿಗಾಗಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.

ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಶೇ.70 ರಷ್ಟು ಮಕ್ಕಳಿಗೆ ಸುರಕ್ಷಿತ ಎಂದು ಕಂಡುಬರುವ ಸ್ಥಳಗಳಲ್ಲೇ ನಡೆಯುತ್ತವೆ. ಶಾಲೆಗಳಲ್ಲಿ, ಮನೆಗಳಲ್ಲಿ, ಅಪರಿಚಿತರಿಗಿಂತ ಪರಿಚಿತ ವ್ಯಕ್ತಿಗಳಿಂದಲೇ ಹೆಚ್ಚು ದೌರ್ಜನ್ಯ ನಡೆಯಲಿದ್ದು, ಹೆಣ್ಣು ಮಕ್ಕಳು ಮಾತ್ರವಲ್ಲದೇ ಗಂಡು ಮಕ್ಕಳ ಮೇಲೆಯೂ ನಡೆಯಲಿದ್ದು, ಇಂತಹ ಸಂದರ್ಭದಲ್ಲಿ ಪೋಷಕರು ಮಕ್ಕಳಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿರೂಪಾಕ್ಷ ಗೌಡ ಪಾಟೀಲ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Edited By : PublicNext Desk
Kshetra Samachara

Kshetra Samachara

20/11/2024 09:05 pm

Cinque Terre

2.12 K

Cinque Terre

0

ಸಂಬಂಧಿತ ಸುದ್ದಿ