ಅಥಣಿ: ತಾಲೂಕಿನಲ್ಲಿ ಕಳೆದ ಎರಡು ದಿನಗಳಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ 4 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ನಿನ್ನೆ ತಡರಾತ್ರಿ ತಾಲೂಕಿನ ಯಲಿಹಡಗಲಿ ಗ್ರಾಮದಲ್ಲಿ ಬೈಕ್ ಹಾಗೂ ಟಿಪ್ಪರ್ ಮಧ್ಯೆ ಅಪಘಾತ ಸಂಭವಿಸಿ ಸವಾರ ರಾಮತೀರ್ಥ ಗ್ರಾಮದ ವಿಠಲ ಖಾಂಡೆಕರ(39) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಅಥಣಿ ಹೊರವಲಯದಲ್ಲಿ ಕಾರು ಹಾಗೂ ಕಬ್ಬು ತುಂಬಿದ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ 4 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ ಅಥಣಿ ಹೊರವಲಯದ ಅಥಣಿ-ವಿಜಯಪುರ ಹೆದ್ದಾರಿಯ ಕರಿಮಸೂತಿ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ತಾಲೂಕಿನ ಯಲಿಹಡಗಲಿ ಗ್ರಾಮದ ಯಮನಪ್ಪ ರಾಯಪ್ಪ ನಾಯಕ್ (50) ಮೃತ ದುರ್ದೈವಿಯಾಗಿದ್ದು, ಬೈಕ್ ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದಾನೆ.
ಅಥಣಿಯಲ್ಲಿ ಹೆಚ್ಚಾದ ಟ್ರಾಫಿಕ್ ನಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಆದಷ್ಟು ಬೇಗ ಟ್ರಾಫಿಕ್ ನಿಯಂತ್ರಣಕ್ಕೆ ಅಥಣಿಯಲ್ಲಿಯೇ ಟ್ರಾಫಿಕ್ ಪೊಲೀಸ್ ಠಾಣೆ ನಿರ್ಮಿಸಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.
PublicNext
20/11/2024 10:10 pm