ಮುಲ್ಕಿ : ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ವಿವಿಧ ಬಿರುದಾವಳಿಗಳೊಂದಿಗೆ ಭವ್ಯ ಮೆರವಣಿಗೆಯಲ್ಲಿ ಹಾಗೂ ಚಂದ್ರಮಂಡಲ ರಥದಲ್ಲಿ ಶ್ರೀ ದೇವರನ್ನು ಕುಳ್ಳಿರಿಸಿ ,ಕುದ್ರುವಿನ ವಿಶೇಷ ಮಂಟಪದಲ್ಲಿ ಶ್ರೀ ದೇವರಿಗೆ ಪೂಜೆ ನಡೆದ ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ವೃಂದ ಆಡಳಿತ ಮಂಡಳಿ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು
Kshetra Samachara
21/11/2024 08:27 am