ಬೆಂಗಳೂರು : ಆದಾಯ ಮೂಲಕ್ಕಿಂತಲೂ ಅಧಿಕ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದ ಎರಡು ಹಾಗೂ ಮಂಡ್ಯ, ಚಿಕ್ಕಬಳ್ಳಾಪುರದ ತಲಾ ಒಂದೊಂದು ಕಡೆಗಳಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಶೋಧ ಆರಂಭಿಸಿದೆ.
ಬೆಂಗಳೂರು ನಗರ ಯೋಜನಾ ಇಲಾಖೆಯ ನಿರ್ದೇಶಕ ಎನ್.ಕೆ.ತಿಪ್ಪೇಸ್ವಾಮಿ ಅವರ ಬನಶಂಕರಿ 1ನೇ ಹಂತದಲ್ಲಿರುವ ನಿವಾಸ, ಅಬಕಾರಿ ಇಲಾಖೆಯ ಅಧೀಕ್ಷಕ ಮೋಹನ್.ಕೆ ಅವರ ಕನಕಪುರ ರಸ್ತೆಯಲ್ಲಿರುವ ನಿವಾಸ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಅವರ ಮಂಡ್ಯದ ನಿವಾಸ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಎಂ.ಸಿ.ಕೃಷ್ಣವೇಣಿ ಅವರ ಚಿಕ್ಕಬಳ್ಳಾಪುರದ ನಿವಾಸಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಶೋಧಕಾರ್ಯ ಮುಂದುವರೆಸಿದೆ.
PublicNext
21/11/2024 09:39 am