ಬೆಂಗಳೂರು : ರಾಜ್ಯದಲ್ಲಿ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ಉಪಚುನಾವಣೆ ನಡೆದಿತ್ತು. ಆಡಳಿತಾರೂಢ ಕಾಂಗ್ರೆಸ್ ಮತ್ತು ಎನ್ ಡಿ ಎ ಮೈತ್ರಿಕೂಟದ ನಡುವೆ ಸಾಕಷ್ಟು ಪೈಪೋಟಿ ನಡೆದಿತ್ತು. ಈ ಉಪಚುನಾವಣೆಯಲ್ಲಿ ಗೆಲುವು ಸೋಲು ಯಾರದ್ದು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ ಹೀಗಾಗಿ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇದ್ರ ನಡುವೆ
ಮಹಾರಾಷ್ಟ್ರ ಜಾರ್ಖಂಡ್ ಚುನಾವಣೆಗಳು ಮುಕ್ತಾಯದ ಬೆನ್ನಲ್ಲೇ ಇದೀಗ ಮೂರು ಕ್ಷೇತ್ರಗಳ ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿವೆ.
P-Marq ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರದಲ್ಲಿ NDA ಹಾಗೂ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದೆ. P- Marq ಪ್ರಕಾರ
ಚನ್ನಪಟ್ಟಣ ಹಾಗೂ ಶಿಗ್ಗಾಂವಿಯಲ್ಲಿ ಎನ್ ಡಿ ಎ ಮೈತ್ರಿಕೂಟ ಅಂದ್ರೆ ಬಿಜೆಪಿ ಜೆಡಿಎಸ್ ಮೈತ್ರಿಕೂಟ ಗೆಲ್ಲುವ ಸಾಧ್ಯತೆಗಳಿವೆ ಹಾಗೇ ಸಂಡೂರು ಕ್ಷೇತ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ತಿಳಿಸಿದೆ.ಈ ಸಮೀಕ್ಷೆ ಪ್ರಕಾರ ವ್ಯಾಖ್ಯಾನಿಸೋದಾದ್ರೆ ಈ ಹಿಂದೆ ನಡೆದ ಚುನಾವಣೆಯಲ್ಲಿ ಯಾರು ಆಯ್ಕೆಯಾಗಿದ್ರು ಈಗ ಅವರ ಕುಟುಂಬ ವರ್ಗದವರನ್ನೇ ಮತ್ತೆ ಜನ ಆಯ್ಕೆ ಮಾಡಿದ್ದಾರೆ ಎಂದು ಹೇಳಬಹುದು.
ಅಂತಿಮವಾಗಿ ನಿಖರವಾದ ಫಲಿತಾಂಶಕ್ಕಾಗಿ ಇದೇ ಶನಿವಾರ ಅಂದ್ರೆ 23 ರಂದು ಪ್ರಕಟಗೊಳ್ಳಲಿರುವ ಫಲಿತಾಂಶಕ್ಕಾಗಿ ನಾವು ಕಾಯಲೇಬೇಕು.
PublicNext
21/11/2024 10:25 am