ಯಲ್ಲಾಪುರ : ವಿವಿದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯಲ್ಲಾಪುರ ಪಟ್ಟಣದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಅರಣ್ಯ ಇಲಾಕೆಯ ಆವರಣದಿಂದ ತಹಶೀಲ್ದಾರ್ ಕಚೇರಿಯ ವರಗೆ ಮೆರವಣಿಗೆ ನಡೆಸಿದ ರೈತರು, ಕೆಲವು ನಿಮಿಷ ಹೆದ್ದಾರಿಯಲ್ಲಿ ಕುಳಿತು ಧರಣಿ,ರಸ್ತೆ ತಡೆ ನಡೆಸಿದರು.
ರೈತರ ಹಕ್ಕುಗಳನ್ನು ಮೊಟಕುಗೊಳಿಸಲಾಗುತ್ತಿದೆ. ರೈತರಿಗೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳು ದೊರಕುತ್ತಿಲ್ಲ. ಕಾಡು ಪ್ರಾಣಿಗಳ ಹಾವಳಿ, ನಾನಾ ಕಾರಣಗಳಿಂದ ಬೆಳೆ ಹಾನಿ ಆಗುತ್ತಿದ್ದರೂ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯುತ್ತಿಲ್ಲ. ಸರ್ಕಾರಿ ಕಚೇರಿಗಳಲ್ಲಿ ರೈತರನ್ನು ಶೋಷಿಸಲಾಗುತ್ತಿದೆ ಎಂದು ರೈತರು ಆಕ್ರೋಷ ವ್ಯಕ್ತಪಡಿಸಿದರು.
ಸಹಾಯಕ ಆಯುಕ್ತೆ ಕಾವ್ಯಾರಾಣಿ ಹಾಗೂ ಎಸಿಎಫ್ ಹಿಮವತಿ ಭಟ್ ಅವರಿಗೆ ರೈತರು ಮನವಿ ಸಲ್ಲಿಸಿ, ರೈತರಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದರು. ವಿ.ಪ.ಸದಸ್ಯ ಶಾಂತಾರಾಮ ಸಿದ್ದಿ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಮಾತನಾಡಿದರು
Kshetra Samachara
21/11/2024 10:48 am