ಚಿಕ್ಕೋಡಿ: ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿಯಾಗಿ ಅನಾರೋಗ್ಯದಿಂದ ಬಳಲುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ.
ಕುಡಿಯುವ ನೀರಲ್ಲಿ ಕೊಳಚೆ ನೀರು ಮಿಶ್ರಣವಾಗಿ ವಾಂತಿ ಭೇದಿ ಶುರುವಾಗಿದೆ. ಗ್ರಾಮದ ಬೋರ್ ವೆಲ್ ಮೂಲಕ ನಲ್ಲಿಗೆ ನೀರು ಸರಬರಾಜು ಮಾಡಲಾಗುತಿತ್ತು. ನೀರು ಸರಬರಾಜು ಮಾಡುವ ಪೈಪ್ ಒಡೆದು ಕೊಳಚೆ ನೀರು ಮಿಶ್ರಣವಾಗಿದೆ. ಅಸ್ವಸ್ಥಗೊಂಡ 10 ಕ್ಕೂ ಹೆಚ್ಚು ಜನರಿಗೆ ನಿಪ್ಪಾಣಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದವರಿಗೆ ಗ್ರಾಮದಲ್ಲೇ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಗ್ರಾಮದಲ್ಲಿ ತಾಲೂಕು ವೈದ್ಯಾಧಿಕಾರಿಗಳ ತಂಡ ಬೀಡು ಬಿಟ್ಟಿದೆ.
PublicNext
21/11/2024 01:21 pm