ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ - ಶಾಸಕ ಹೆಚ್.ಡಿ.ತಮ್ಮಯ್ಯ

ಚಿಕ್ಕಮಗಳೂರು : ದುರ್ಬಲರು, ಅಸಹಾಯಕರು ಹಾಗೂ ನಿರ್ಗತಿಕರಿಗೆ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆಗಳ ವಿವಿಧ ಸೌಲಭ್ಯಗಳು ಆರ್ಥಿಕವಾಗಿ ಸಬಲರಾಗಿಸಿ ಬದುಕನ್ನು ರೂಪಿಸಿ ನಿಸ್ವಾ ರ್ಥದಿಂದ ಸೇವೆ ಸಲ್ಲಿಸುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ತಾಲ್ಲೂಕಿನ ದೇವಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿ ನಿರ್ಮಾಣಗೊಂಡ ವಾತ್ಸಲ್ಯ ಮನೆಯನ್ನು ಫಲಾನುಭವಿ ರತ್ನಮ್ಮ ಅವರಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಟ್ರಸ್ಟ್ ವಸತಿ ರಹಿತ ನಿರ್ಗತಿಕರಿಗೆ ನಿಗಧಿತ ವೆಚ್ಚದಲ್ಲಿ ಹಾಲ್, ಅಡುಗೆ ಮನೆ, ಶೌಚಾಲಯ ಹೊಂದಿರುವ ಪುಟ್ಟಮನೆ ನಿರ್ಮಿಸಿ ಕೊಟ್ಟಿದೆ. ಅಲ್ಲದೇ ಬಡವರ ಪರವಾಗಿ ಅಭಿವೃದ್ದಿ ಕೈಗೊಂಡು ಅಸಹಾಯಕರಿಗೆ ಸಹಾಯಹಸ್ತ ಕಲ್ಪಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

Edited By : PublicNext Desk
Kshetra Samachara

Kshetra Samachara

21/11/2024 02:31 pm

Cinque Terre

1.76 K

Cinque Terre

0

ಸಂಬಂಧಿತ ಸುದ್ದಿ