ಚಿತ್ರದುರ್ಗ : ಕಿಡಿಗೇಡಿಗಳು ಬೆಟ್ಟದ ಮೇಲಿನ ದೇವಸ್ಥಾನವನ್ನು ಧ್ವಂಸಗೊಳಿಸಿದ ಕೃತ್ಯಕ್ಕೆ ಗ್ರಾಮಸ್ಥರು ಆಕ್ರೋಶ ಹೊರಹಾಕಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಟಿ. ಎಮ್ಮಿಗನೂರು ಗ್ರಾಮದ ಹೊರವಲಯದ ಬೆಟ್ಟದಲ್ಲಿ ನಡೆದಿದೆ.
ಟಿ. ಎಮ್ಮೆಗನೂರು ಗ್ರಾಮದ ಹೊರವಲಯದ ಬೆಟ್ಟದಲ್ಲಿ ಪುರಾತನ ಕಾಲದಿಂದಲೂ ಗುಡ್ಡದ ಮೇಲೆ ನೆಲೆಸಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವಿದೆ. ಟಿ. ಎಮ್ಮಿಗನೂರು ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಇಲ್ಲಿ ಪೂಜಿಸಿಕೊಂಡು ಬರುತ್ತಿದ್ದಾರೆ.
ಇತ್ತೀಚೆಗಷ್ಟೇ ಭಕ್ತರು ಪುರಾತನ ದೇವಸ್ಥಾನದ ಜೀರ್ಣೋದ್ಧಾರ ಕೀಡ ಮಾಡಿದ್ರು. ವಿಶೇಷವಾಗಿ ಮಳೆ ಬೆಳೆಗಾಗಿ ಬೆಟ್ಟದ ಆಂಜನೇಯ ಸ್ವಾಮಿಯನ್ನು ಪೂಜಿಸುವುದು ಇಲ್ಲಿ ವಾಡಿಕೆ. ಇಂಥ ದೇವಾಲಯವನ್ನು ಕಿಡಿಗೇಡಿಗಳು ನಾಶ ಮಾಡಿದ್ದು, ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಂತಾಗಿದೆ ಅಂತಾ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಪಕ್ಕದಲ್ಲೇ ಮೈನ್ಸ್ ಕಂಪನಿ ಕಾರ್ಯ ನಿರ್ವಹಿಸುತ್ತಿದ್ದು, ದುರುದ್ದೇಶದಿಂದ ಅವರೇ ನಾಶಪಡಿಸಿರಬಹುದು ಅಂತಾ ಗ್ರಾಮಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ತನಿಖೆ ಮಾಡಿಸಿ ಎಂದು ಹೊಳಲ್ಕೆರೆ ತಹಾಶೀಲ್ದಾರ್ ಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
Kshetra Samachara
21/11/2024 02:57 pm