ತುಮಕೂರು : ಇತ್ತೀಚೆಗೆ ನಗರಗಳಲ್ಲಿ ಪುಂಡರ ಅಟ್ಟಹಾಸ ಹೆಚ್ಚಾಗುತ್ತಿದ್ದು, ವೀಲಿಂಗ್ ಮಾಡುತ್ತಾ ಉಳಿದ ಪ್ರಯಾಣಿಕರಿಗೂ ತೊಂದರೆ ನೀಡುತ್ತಿದ್ದಾರೆ. ಇದೀಗ ಇವೆಲ್ಲದಕ್ಕೂ ಬ್ರೇಕ್ ಹಾಕಲು ತುಮಕೂರು ಪೊಲೀಸರು ಮುಂದಾಗಿದ್ದು, ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ತುಮಕೂರಿನಲ್ಲಿ ಕೆಲ ಪುಂಡರು ವೀಲಿಂಗ್ ಮಾಡುತ್ತಾ ಉಳಿದವರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದ ಹಿನ್ನಲೆ ಇದೀಗ ನಗರ ಪೊಲೀಸರು ಹೊಸ ಸಂಚಾರಿ ನಿಯಮವನ್ನು ಜಾರಿಗೊಳಿಸಿದ್ದಾರೆ.
ರಸ್ತೆಯಲ್ಲಿ ಅಂಕು ಡೊಂಕಾಗಿ ವಾಹನ ಚಲಾಯಿಸುವುದು ನಿಮ್ಮ ಅಮೂಲ್ಯವಾದ ಜೀವಕ್ಕೆ ಅಪಾಯಕಾರಿ, ಬೈಕ್ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಿ. ಒಂದೇ ಬೈಕ್ ನಲ್ಲಿ ಇಬ್ಬರಿಗಿಂತ ಹೆಚ್ಚು ಜನ ಪ್ರಯಾಣಿಸುವುದು ಅಪರಾಧ ಹೀಗಾಗಿ ಸಾರ್ವಜನಿಕ ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸಿರಿ ಎಂದು ತುಮಕೂರು ಪೊಲೀಸರು ತಿಳಿಸಿದ್ದಾರೆ.
ಒಂದು ವೇಳೆ ಸಂಚಾರಿ ನಿಯಮವನ್ನು ಉಲ್ಲಂಘಿಸಿ ವೀಲಿಂಗ್, ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸಿದರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
PublicNext
21/11/2024 03:22 pm