ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಏ... ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಕ್ರಮಕ್ಕೆ ಮುಂದಾದ ಮಧು ಬಂಗಾರಪ್ಪ : ಸ್ಟುಪಿಡ್‌ ಎಂದ ಬಿಜೆಪಿ

ಬೆಂಗಳೂರು : ವಿಧಾನಸೌಧದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ವಿದ್ಯಾರ್ಥಿಯೊಬ್ಬ ಸಂವಾದ ನಡೆಯುತ್ತಿದ್ದ ಸಂದರ್ಭದಲ್ಲಿ "ಏ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ' ಎಂದಿದ್ದಾನೆ.

ವಿದ್ಯಾರ್ಥಿ ಹೇಳಿಕೆಯನ್ನು ಆರಂಭದಲ್ಲಿ ತಮಾಷೆಯಾಗಿ ತೆಗೆದುಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಂತರ ವಿದ್ಯಾರ್ಥಿ ವಿರುದ್ಧ ಗರಂ ಆದರು. “ಈಗ ನಾನೇನು ಉರ್ದುವಿನಲ್ಲಿ ಮಾತನಾಡುತ್ತಿದ್ದೇನಾ? ಸ್ಟುಪೀಡ್. ಯಾರೂ ಹಾಗೆ ಹೇಳಿದ್ದು, ಮಾಹಿತಿ ತೆಗದುಕೊಳ್ಳಿ ಸುಮ್ಮನೆ ಬಿಡಬೇಡಿ” ಅಂತಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರಿಗೆ ಸೂಚನೆ ನೀಡಿದರು.

ಶಿಕ್ಷಣ ಸಚಿವರ ಈ ಆದೇಶಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. “ಟ್ವೀಟ್​ ಮಾಡಿ, ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ. ಇದು ಅಕ್ಷರಶಃ ನಮ್ಮ ಅವಿದ್ಯಾವಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅನ್ವಯಿಸುತ್ತದೆ!!”

“ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ ಎಂದು ಮಧು ಬಂಗಾರಪ್ಪ ಅವರೆ ಹಿಂದೊಮ್ಮೆ ಹೇಳಿದ್ದರು, ಅದನ್ನೇ ವಿದ್ಯಾರ್ಥಿಯೊಬ್ಬ ನೆನಪಿಸದ ತಕ್ಷಣ, ಆ ವಿದ್ಯಾರ್ಥಿ ಸೇರಿದಂತೆ ಅಲ್ಲಿನ ಶಿಕ್ಷಕರು ಹಾಗೂ ಬಿಇಒ ಮೇಲೆ ಕ್ರಮ ಕೈಗೊಳ್ಳಿ ಎಂದು ಆದೇಶಿಸಿರುವುದು ನಿಜಕ್ಕೂ ಸ್ಟುಪಿಡ್‌!! ಕಾಂಗ್ರೆಸ್ಸಿಗರ ಈ ರೀತಿಯ ಸರ್ವಾಧಿಕಾರಿ ಧೋರಣೆ ಪ್ರಜಾಪ್ರಭುತ್ವಕ್ಕೆ ಮಾರಕ” ಎಂದಿದೆ.

Edited By : Nirmala Aralikatti
PublicNext

PublicNext

21/11/2024 03:23 pm

Cinque Terre

31.78 K

Cinque Terre

9

ಸಂಬಂಧಿತ ಸುದ್ದಿ