ಕಾರವಾರ : ಕಳ್ಳರು ರಾತ್ರಿಯ ವೇಳೆ ದರೋಡೆ ಮಾಡಿದರೆ ಕಾಂಗ್ರೆಸ್ ಸರಕಾರವು ಹಗಲು ದರೋಡೆ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.
ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ಜಿಲ್ಲಾ ಬಿಜೆಪಿ ಘಟಕದಿಂದ ನಡೆದ ಧರಣಿಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕಾರ್ಯ ಮಾಡುವ ಬದಲು ಅನೇಕ ಹಗರಣಗಳನ್ನು ಮಾಡಿಕೊಂಡಿದೆ. ಸಾರ್ವಜನಿಕರ ಆಸ್ತಿ ನುಂಗುವ ಪರಿಸ್ಥಿತಿ ಸರಕಾರಕ್ಕೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು .
PublicNext
21/11/2024 04:42 pm