ಬೆಂಗಳೂರು: ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲೂ ಕೆಎಂಎಫ್ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.ಈ ಮೂಲಕ ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ದೆಹಲಿಯ ಅಶೋಕ ಹೊಟೇಲ್ನಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಬಿಡುಗಡೆ ಮಾಡುವ ಮೂಲಕ ಅಧಿಕೃತ ಮಾರಾಟಕ್ಕೆ ಸಿಎಂ ಚಾಲನೆ ನೀಡಿದರು.
ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್‌ಗೆ ಏರಿಸುವ ಗುರಿ ಕೆಎಂಎಫ್ ಇಟ್ಟುಕೊಂಡಿದೆ.
ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಮತ್ತು ರೆಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ, ಮೊದಲಾದವರು ಉಪಸ್ಥಿತರಿದ್ದರು.
PublicNext
21/11/2024 04:51 pm