ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ವಹಣೆಗೂ ಹಣವಿಲ್ಲ, ಇದಕ್ಕಾಗಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಏರಿಸಿದ್ದಾರೆ – ಆರ್. ಅಶೋಕ್

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕ ಹೆಚ್ಚಳಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ಜಯನಗರದ ಸಂಜಯಗಾಂಧಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಕಳೆದ 16 ತಿಂಗಳಲ್ಲಿ ಜನರ ತಲೆಗೆ ಚಪ್ಪಡಿ ಎಳೆಯುವ ಕೆಲಸ ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಹಣದ ಕೊರತೆಯಿಂದಾಗಿ ಔಷಧಿ ಖರೀದಿ ಸಾಧ್ಯವಾಗುತ್ತಿಲ್ಲ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನುದಾನ ಕಡಿತ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ವಹಣೆಗೂ ಹಣವಿಲ್ಲ. ಇದಕ್ಕಾಗಿ ಸೇವಾ ಶುಲ್ಕವನ್ನು ಏರಿಸಲಾಗಿದೆ. ಅನ್ನ ಮತ್ತು ಆರೋಗ್ಯದ ವಿಚಾರದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ದೂರಿದರು.

ಒಂದು ಕಡೆ ಜಮೀನು ಹೋಗುತ್ತಿದೆ, ಮತ್ತೊಂದು ಕಡೆ ರೇಷನ್‌ ಕಾರ್ಡ್‌ ಹೋಗುತ್ತಿದೆ, ಈಗ ಉಚಿತ ಆರೋಗ್ಯವೂ ದೊರೆಯುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಶುಲ್ಕಗಳನ್ನು ಹೆಚ್ಚು ಮಾಡಿರುವುದೇ ಖಜಾನೆ ಖಾಲಿಯಾಗಿರುವುದಕ್ಕೆ ಸಾಕ್ಷಿ. ಐದು ಗ್ಯಾರಂಟಿಗಳಿಗಾಗಿ ಜನರ ಮೇಲೆ ತೆರಿಗೆ ಹೊರೆ ಹಾಕಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರ ಪ್ರಕಾರ ಇದು ಬಡವರ ಪರವಾದ ಸರ್ಕಾರವೇ? ಎಂದು ಪ್ರಶ್ನಿಸಿದರು.

ಮುಡಾ ಹಗರಣದ ನಂತರ ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡು ಜನರ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಲಂಚ ಇದ್ದರೆ ಮಾತ್ರ ವಿಧಾನಸೌಧಕ್ಕೆ ಪ್ರವೇಶ ಎಂಬ ಸ್ಥಿತಿ ಇದೆ. ಆರೋಗ್ಯ ಸೇವೆಯನ್ನು ಸಂಪೂರ್ಣ ಉಚಿತವಾಗಿ ನೀಡಬೇಕು. ಇದರ ಮೇಲೂ ಸರ್ಕಾರ ವಕ್ರದೃಷ್ಟಿ ಬೀರಿದೆ ಎಂದು ಆಕ್ರೋಶ ಹೊರಹಾಕಿದರು.

Edited By : Vinayak Patil
PublicNext

PublicNext

21/11/2024 04:55 pm

Cinque Terre

14.88 K

Cinque Terre

0

ಸಂಬಂಧಿತ ಸುದ್ದಿ