ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಮಳೆಹಾನಿ ಪರಿಹಾರಕ್ಕೆ ಸೂಚನೆ

ಉಡುಪಿ : ಕಳೆದ ಮುಂಗಾರು ಮಳೆ ಸಂದರ್ಭದಲ್ಲಿ ಮನೆಹಾನಿ ಹಾಗೂ ಬೆಳೆಹಾನಿಗೆ ಒಳಗಾದವರಿಗೆ ಪರಿಹಾರದ ಹಣ ನೀಡುವುದು ಬಾಕಿ ಇದ್ದಲ್ಲಿ ಆದಷ್ಟು ಬೇಗನೆ ಅರ್ಹ ಫಲಾನುಭವಿಗಳಿಗೆ ಪರಿಹಾರದ ಹಣವನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಈ ಬಾರಿ ಸುರಿದ ಅಧಿಕ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನ‌ರ್ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದ ಎಡಿಸಿ, ಪ್ರಾಕೃತಿಕ ವಿಕೋಪ ಯಾವುದೇ ಗಳಿಗೆಯಲ್ಲಿ ಸಂಭವಿಸುವ ಸಾಧ್ಯತೆ ಇರುವುದರಿಂದ ಅವುಗಳನ್ನು ಎದುರಿಸಲು ಸದಾ ಸನ್ನದ್ಧ ರಾಗಿರಬೇಕು ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿ ತಿಂಗಳಿನಿಂದ ಈವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಸುರಿದು ರಸ್ತೆ, ವಿದ್ಯುತ್ ಕಂಬ ಸೇರಿದಂತೆ ಹಲವು ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಅವುಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಯಾವುದೇ ಇಲಾಖೆ ಈಗಾಗಲೇ ಆಗಿರುವ ಮನೆಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇರಿಸಿಕೊಳ್ಳಬಾರದು. ಶಾಲೆ, ಅಂಗನವಾಡಿ ಹಾಗೂ ರಸ್ತೆ ತುರ್ತು ದುರಸ್ಥಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ತ್ವರಿತಗತಿಯಲ್ಲಿ ಕೆಲಸಗಳನ್ನು ಪೂರ್ಣಗೊಳಿ ಸಬೇಕು ಎಂದ ಮಮತಾ ದೇವಿ, ತಹಶೀಲ್ದಾರರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

Edited By : PublicNext Desk
Kshetra Samachara

Kshetra Samachara

21/11/2024 05:54 pm

Cinque Terre

898

Cinque Terre

0

ಸಂಬಂಧಿತ ಸುದ್ದಿ