ಚಿಕ್ಕಮಗಳೂರು: ವಕ್ಫ್ ಕಾಯ್ದೆ ವಿರೋಧಿಸಿ ಬಿಜೆಪಿ ವತಿಯಿಂದ ‘ನಮ್ಮ ಭೂಮಿ-ನಮ್ಮ ಹಕ್ಕು’ ಶೀರ್ಷಿಕೆಯಡಿ ನಡೆಯುತ್ತಿರುವ ಜನ ಜಾಗೃತಿ ಆಂದೋಲನದಲ್ಲಿ ಮಾತನಾಡಿದ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ನಾವು ವಿಪಕ್ಷ ಸ್ಥಾನದಲ್ಲಿ ನಿಂತು ಪ್ರಾಮಾಣಿಕವಾಗಿ ಜನರಿಗೆ ಹಾಗೂ ರೈತರಿಗೆ ಅನ್ಯಾಯವಾದಾಗ ಸರ್ಕಾರವನ್ನು ಎಚ್ಚರಿಸಿ ಸರಿದಾರಿಗೆ ತರಲು ಈ ಹೋರಾಟ ಮಾಡುತ್ತಿದ್ದೇವೆ. ಭಾರತೀಯ ಜನತಾ ಪಕ್ಷ ಸಂಘಟನೆಯನ್ನು ಬಲಪಡಿಸದಿದ್ದರೆ ಈ ದೇಶದ, ರಾಜ್ಯದ, ಪರಿಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಮೊದಲು ಅರಿತುಕೊಳ್ಳಬೇಕು ಇದು ರಾಜಕೀಯ ಹೋರಾಟ ಅಲ್ಲಾ ಬದಲಾಗಿ ನೀವು ಮನೆ ಕಟ್ಟಿ ವಾಸಿಸುತ್ತಿರುವ ಜಾಗದ ಉಳಿವಿಗಾಗಿ ಹೋರಾಟ ಎಂದರು.
PublicNext
21/11/2024 06:25 pm