ಹಾವೇರಿ: ರೈತರ ಜಮೀನು ತೆರವಿಗೆ ವಕ್ಫ್ ನೋಟಿಸ್ ನೀಡಿರುವ ಕ್ರಮ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಮಾಜಿ ಸಚಿವ ಬಿ.ಸಿ ಪಾಟೀಲ್ ಶಿಗ್ಗಾಂವ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೇರಿದಂತೆ 50ಕ್ಕೂ ಅಧಿಕ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.
ಇದಕ್ಕೂ ಮೊದಲು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಹೊಸಮನಿ ಸಿದ್ದಪ್ಪ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ಬಿ.ಸಿ ಪಾಟೀಲ್, ಬಿಜೆಪಿ ಹಾವೇರಿ ಜಿಲ್ಲಾದ್ಯಕ್ಷ ಅರುಣ್ ಕುಮಾರ್, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ವಿರುದ್ದ ಕಮಲ ಪಡೆ ಆಕ್ರೋಶ ವ್ಯಕ್ತಪಡಿಸಿತು. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ ಕೇಸರಿ ಪಡೆ ಸರ್ಕಾರದ ವಿರುದ್ಧ ಘೋಷಣೆ ಹಾಕಿತು.
ಸಂಜೆವರೆಗೆ ಪ್ರತಿಭಟನೆ ಮಾಡಲು ಬಿಜೆಪಿ ಮುಖಂಡರು ಮುಂದಾಗುತ್ತಿದ್ದಂತೆ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
PublicNext
21/11/2024 06:56 pm