ತುಮಕೂರು: ಕೊಪ್ಪಳ ಜಿಲ್ಲೆಯ ಮರಕುಂಬಿಯಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಗೆ ಶಿಕ್ಷೆ ಘೋಷಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಕೂಡ ಇಂತಹುದೇ ಐತಿಹಾಸಿಕ ಮಹತ್ವದ ತೀರ್ಪನ್ನು ಬುಧವಾರ ಪ್ರಕಟಿಸಿದೆ.
2010ರಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿಯ ಗೋಪಾಲಪುರ ಗ್ರಾಮದ ಡಾಬಾ ಹೊನ್ನಮ್ಮ ಅವರನ್ನು ಕಲ್ಲಿನಿಂದ ಹೊಡೆದು ಸಾಯಿಸಿದ್ದ ಪ್ರಕರಣದಲ್ಲಿ 27 ಮಂದಿ ಆರೋಪಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು. ಅದರಲ್ಲಿ 6 ಮಂದಿ ಆರೋಪಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ.
ಉಳಿದ 21ಮಂದಿ ಆರೋಪಿಗಳ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ 3ನೇ ಅಧಿಕ ಸತ್ರ ನ್ಯಾಯಾಲಯ ಈ 21 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ನಾಗಿರೆಡ್ಡಿ ತೀರ್ಪು ನೀಡಿ ಆದೇಶಿಸಿದ್ದಾರೆ.
PublicNext
21/11/2024 07:47 pm