ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಸಭೆಯಲ್ಲಿ ಸಂಸದರ ಜೊತೆ ಸಮಸ್ಯೆ ತೋಡಿಕೊಂಡ ಅಧಿಕಾರಿಗಳು

ಉಡುಪಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ ರಜತಾದ್ರಿಯ ಸಂಸದರ ಕಚೇರಿಯಲ್ಲಿ ಬಿಎಸ್ಸೆನ್ನೆಲ್ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿದರು. ಬ್ಯಾಟರಿ ಕೊರತೆ ಕಾರಣ ಸುಮಾರು 60ಕ್ಕೂ ಅಧಿಕ ಟವರ್ ಗಳು ಕಾರ್ಯನಿರ್ವಹಿಸಲು ತೊಂದರೆಯಾಗುತ್ತಿವೆ. ಕೆಲವು ಕಡೆಗಳಲ್ಲಿ ಜನರೇಟ‌ರ್ ವ್ಯವಸ್ಥೆ ಇದ್ದರೂ ನಿರ್ವಹಣೆ ಕೊರತೆ, ಗುತ್ತಿಗೆದಾರರ ಸಮಸ್ಯೆಯಿಂದ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಈ ಕುರಿತು ಇಲಾಖೆ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಈ ವೇಳೆ ಅಧಿಕಾರಿಗಳು, ಬ್ಯಾಟರಿ ಮತ್ತು ಸೋಲಾರ್ ಪ್ಯಾನೆಲ್ಗಳು ಕಳಪೆ ಗುಣಮಟ್ಟದಲ್ಲಿ ಬರುತ್ತಿರುವುದರಿಂದ ಗುಣಮಟ್ಟದ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಸಮಸ್ಯೆ ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ಸಂಬಂಧಿತ ಕೇಂದ್ರ ಸಚಿವರಿಗೆ ಪತ್ರ ಬರೆದು ಈ ಬಗ್ಗೆ ಗಮನ ಸೆಳೆಯುವುದಾಗಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಬ್ಯಾಟರಿಗಳು ಬಂದಿವೆ, ಆದರೆ ಅಳವಡಿಸಿಲ್ಲ. ಗುತ್ತಿಗೆದಾರರು ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಸಾಕಷ್ಟು ತೊಂದರೆಗಳಾಗಿದೆ ಎಂದರು. ಅಗತ್ಯವಿದ್ದರೆ ಪ್ರಕರಣ ದಾಖಲಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದರು.

Edited By : PublicNext Desk
PublicNext

PublicNext

21/11/2024 08:53 pm

Cinque Terre

8.24 K

Cinque Terre

0

ಸಂಬಂಧಿತ ಸುದ್ದಿ