ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ತಲ್ಲೂರಿನ ರವಿ ಖಾರ್ವಿಗೆ 'ದೇಶದ ಅತ್ಯುತ್ತಮ ಸಮುದ್ರ ಮೀನು ಕೃಷಿಕ' ಪ್ರಶಸ್ತಿ

ಕುಂದಾಪುರ: ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ(ಐಸಿಎಆರ್- ಸಿಎಂಎಫ್‌ಆರ್‌ಐ) ಮಂಗಳೂರು ಪ್ರಾದೇಶಿಕ ಕೇಂದ್ರ ಕರ್ನಾಟಕದಿಂದ ತರಬೇತಿ ಪಡೆದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗ್ರಾಮದ ಪ್ರಗತಿಪರ ಮೀನು ಕೃಷಿಕ ರವಿ ಖಾರ್ವಿ, ಭಾರತ ಸರಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ ಅತ್ಯುತ್ತಮ ಸಮುದ್ರ ಮೀನು ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನವದೆಹಲಿಯಲ್ಲಿ ಗುರುವಾರ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್ ಅವರಿಂದ ರವಿ ಖಾರ್ವಿ ಈ ಪ್ರಶಸ್ತಿಯನ್ನು 1 ಲಕ್ಷ ರೂ. ನಗದಿನೊಂದಿಗೆ ಸ್ವೀಕರಿಸಿದರು. ಐಸಿಎಆರ್-ಸಿಎಂಎಫ್‌ಆರ್‌ಐನ ಮಂಗಳೂರು ಪ್ರಾದೇಶಿಕ ಕೇಂದ್ರದ ಮಾರ್ಗದರ್ಶನದಲ್ಲಿ ಸಮಗ್ರ ಮಲ್ಟಿ-ಟ್ರೋಫಿಕ್ ಅಕ್ವಾಕಲ್ಚರ್(ಐಎಂಟಿಎ) ಪದ್ಧತಿಯ ಯಶಸ್ವಿ ಅನುಷ್ಠಾನಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ರವಿ ಖಾರ್ವಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ, ಹೈದರಾಬಾದ್‌ನ ಹಣಕಾಸಿನ ನೆರವಿನೊಂದಿಗೆ 2023-24ರ ಅವಧಿಯಲ್ಲಿ ಹೊಸ ತಾಂತ್ರಿಕತೆ ಐಎಂಟಿಎ ಅನುಷ್ಠಾನಗೊಳಿಸಿದ ಯೋಜನೆಯ ಫಲಾನುಭವಿಗಳಲ್ಲಿ ರವಿ ಒಬ್ಬರಾಗಿದ್ದರು.

Edited By : PublicNext Desk
Kshetra Samachara

Kshetra Samachara

21/11/2024 09:12 pm

Cinque Terre

3.68 K

Cinque Terre

0