ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ರಾಜರ ಗದ್ದುಗೆಗೆ ಸೇರಿದ ಒತ್ತುವರಿ ಜಾಗ, ತೆರವಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯ

ಕೊಡಗು: ಮಡಿಕೇರಿಯಲ್ಲಿರುವ ರಾಜರ ಗದ್ದುಗೆಗೆ ಸೇರಿದ 19.86 ಎಕರೆ ಜಾಗದ ಪೈಕಿ ಒತ್ತುವರಿಯಾಗಿರುವ 1.18 ಎಕರೆ ಜಾಗವನ್ನು ತೆರವುಗೊಳಿಸುವಂತೆ ಸರ್ಕಾರದ ಹೊರಡಿಸಿರುವ ಆದೇಶದನ್ವಯ ಜಿಲ್ಲಾಡಳಿತ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಒತ್ತುವರಿ ತೆರವುಗೊಳಿಸುವಂತೆ ನ್ಯಾಯಾಲಯ ಆದೇಶ ಮಾಡಿ ಎರಡು ವರ್ಷವೇ ಕಳೆದಿದೆ. ಆದರೆ ಇಲ್ಲಿಯವರೆಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿರಲಿಲ್ಲ, ಇದೀಗ ಸ್ವತ: ಸರ್ಕಾರವೇ ಆದೇಶ ಹೊರಡಿಸಿ 28 ಮಂದಿಯಿಂದ ಒತ್ತುವರಿಯಾಗಿರುವ 1.18 ಎಕರೆ ಜಾಗವನ್ನು ತೆರವುಗೊಳಿಸಿ ರಾಜರ ಗದ್ದುಗೆಯ ಜಾಗವನ್ನು ಸಂರಕ್ಷಿಸುವಂತೆ 2024 ನ.4ರಂದು ಜಿಲ್ಲಾಡಳಿತಕ್ಕೆ ಆದೇಶ ನೀಡಿದೆ.

ಈ ಆದೇಶದಂತೆ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ನಡೆಸದಿದ್ದರೆ, ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲು ವೀರಶೈವ ಮಹಾಸಭಾ ಚಿಂತನೆ ನಡೆಸಲಿದೆ ಎಂದರು.

Edited By : Nagesh Gaonkar
PublicNext

PublicNext

21/11/2024 09:56 pm

Cinque Terre

14.98 K

Cinque Terre

0

ಸಂಬಂಧಿತ ಸುದ್ದಿ