ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಕೆ ಯೋಜನೆ ಸೌರ ಸ್ವಾಸ್ಥ್ಯ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಕೇಂದ್ರಗಳು ಸೇರಿದಂತೆ 500 ಆರೋಗ್ಯ ಕೇಂದ್ರಗಳಲ್ಲಿ 2026ರ ಒಳಗೆ ಸೌರ ವಿದ್ಯುತ್ ಅಳವಡಿಸುವ ಗುರಿ ಹೊಂದಲಾಗಿದೆ.
120 ಕೋಟಿ ವೆಚ್ವದಲ್ಲಿ ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ಸಿಎಸ್ ಆರ್ ಯೋಜನೆ ಅಡಿಯಲ್ಲಿ ಸೌರ ಶಕ್ತಿ ಅಳವಡಿಸಲಾಗುತ್ತಿದ್ದು, ಇದರಿಂದ 5 ಲಕ್ಷ ವಿದ್ಯುತ್ ಯುನಿಟ್ ಗಳ ಉಳಿತಾಯವಾಗಲಿದೆ. ಇದರಿಂದ ಪ್ರತಿ ತಿಂಗಳಿಗೆ 50 ಲಕ್ಷ ವಿದ್ಯುತ್ ಬಿಲ್ ನಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಉಳಿತಾಯವಾಗಲಿದೆ ಎಂದು ಅಂದಾಜಿಸಲಾದ್ದು, 10 ವರ್ಷಗಳಲ್ಲಿ ಸರಿಸುಮಾರು 100 ಕೋಟಿಯಷ್ಟ ಹಣ ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗಲಿದೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸೆಲ್ಕೋ ಫೌಂಡೇಶನ್ ಆರೋಗ್ಯ ಇಲಾಖೆಯೊಂದಿಗೆ ನಿಜಕ್ಕೂ ಒಂದು ಕ್ರಾಂತಿಕಾರ ಹೆಜ್ಜೆಯಿಟ್ಟಿದೆ.
ಈಗಾಗಲೇ ಪ್ರಥಮ ಹಂತದಲ್ಲಿ 1,152 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿ ಒದಗಿಸಲಾಗಿದ್ದು, ರಾಯಚೂರಿನಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳು ಸಂಪೂರ್ಣವಾಗಿ ಸೌರಶಕ್ತಿ ಹೊಂದಿವೆ. ಇದರಿಂದಾಗಿ ಆರೋಗ್ಯ ಕೇಂದ್ರಗಳ ವಿದ್ಯುತ್ ಬಿಲ್‌ಗಳಲ್ಲಿ ಶೇಕಡ 70 ರಷ್ಟು ಉಳಿತಾಯವಾಗುತ್ತಿದೆ. ಈಗಾಗಲೇ ಸುಮಾರು 3 ಮೆಗಾ ವ್ಯಾಟ್ ಸೌರ ವಿದ್ಯುತ್ ಅನ್ನ ಆರೋಗ್ಯ ಕೇಂದ್ರಗಳಲ್ಲಿ ಉತ್ಪಾದಿಸಲಾಗಿದೆ.
ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರಕ್ಕೆ 100 ಕೋಟಿ ರೂಪಾಯಿ ಉಳಿತಾಯ ಮಾಡುವ ಯೋಜನೆ ಅಳವಡಿಸಿಕೊಂಡಿರುವ ದೇಶದ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದರು.
ಈ ಮಹತ್ವದ ಯೋಜನೆಯಿಂದಾಗಿ 2026ರ ವೇಳೆಗೆ ಕರ್ನಾಟಕದಾದ್ಯಂತ 5,000 ಆರೋಗ್ಯ ಕೇಂದ್ರಗಳಿಗೆ ಸೌರ-ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಲು ಸಾಧ್ಯವಾಗಲಿದೆ. ಸುಸ್ಥಿರ ಶಕ್ತಿಯು ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲಿದೆ ಎಂದರು.
PublicNext
21/11/2024 10:56 pm