ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ 1.71 ಕೋಟಿ ವಂಚನೆ

ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನುಬಾಹಿರ ಚಟುವಟಿಕೆ ಮಾಡುತ್ತಿರುವ ಬಗ್ಗೆ ಆರೋಪಿಸಿ 1.71 ಕೋಟಿ ರೂ. ವಂಚಿಸಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ.11ರಂದು ದೂರುದಾರರು ಮನೆಯಲ್ಲಿರುವಾಗ ಅಪರಿಚಿತ ವ್ಯಕ್ತಿಯೊಬ್ಬ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದಾನೆ. ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದ್ದು, ಮುಂಬಯಿನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು ಕಾನೂನು ಬಾಹಿರ ಚಟುವಟಿಕೆ ನಡೆದಿವೆ. ಮಾರ್ಕೆಟಿಂಗ್ ನೆಪದಲ್ಲಿ ಮೊಬೈಲ್ ನಂಬರ್‌ನಿಂದ ಕರೆ ಮಾಡಿ ಕಿರುಕುಳ ನೀಡುತ್ತಿರುವ ಬಗ್ಗೆ ಎಫ್ ಐಆರ್ ಆಗಿದೆ.

ಕೂಡಲೇ ಅಂಧೇರಿ ಪೂರ್ವ ಠಾಣೆಯನ್ನು ಸಂಪರ್ಕಿಸಬೇಕು. ಇಲ್ಲದಿದ್ದಲ್ಲಿ ನಿಮ್ಮಮೊಬೈಲ್ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದ, ಬಳಿಕ ಅಪರಿಚತ ವ್ಯಕ್ತಿ ಪ್ರದೀಪ್ ಸಾವಂತ್ ಎನ್ನುವಾತನಲ್ಲಿ ದೂರುದಾರರು ಮಾತನಾಡಿದ್ದು, ನರೇಶ್ ಗೋಯೆಲ್ ವಂಚನೆ ಪ್ರಕರಣವನ್ನು ಒಳಗೊಂಡಿರುವ ಮನಿ ಲ್ಯಾಂಡರಿಂಗ್ ಯೋಜನೆಯಲ್ಲಿ ಭಾಗಿ ಯಾಗಿರುವುದರಿಂದ ಇನ್ನೊಂದು ಎಫ್ ಐಆರ್ ದಾಖಲಾಗಿದೆ.

ಅಂಧೇರಿ ಯ ಬ್ಯಾಂಕ್‌ನ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಅದಕ್ಕೆ ಐಡೆಂಟಿಟಿ ಬಳಸಿ ಸಿಮ್ ಖರೀದಿಸಲಾಗಿದ್ದು, ಆ ಕಾರಣದಿಂದ ಬಂಧನ ಮಾಡಲಾಗುವುದು ಎಂದು ತಿಳಿಸಿದ್ದ, ಅನಂತರ ವಾಟ್ಸಾಪ್ ಮೂಲಕ ವೀಡಿಯೋ ಕರೆಯಲ್ಲಿ ರಾಹುಲ್ ಕುಮಾರ್ ಎನ್ನುವಾತ ಪೊಲೀಸ್ ಅಧಿಕಾರಿ ಮತ್ತು ಆಕಾಂಕ್ಷ ಎನ್ನುವ ಮಹಿಳೆ ಸಿಬಿಐ ಅಧಿಕಾರಿಯೆಂದು ತಿಳಿಸಿ, ಸಿಬಿಐ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿ ದೂರುದಾರರ ವಾಟ್ಸಾಪ್ ನಂಬರ್‌ಗೆ ಕಳುಹಿಸಿದ್ದಳು.

ಪ್ರಕರಣ ದಿಂದ ಮುಕ್ತಗೊಳ್ಳಬೇಕಾದರೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಳು. ಅದರಂತೆ ನ. 13ರಿಂದ 19ರ ನಡುವೆ 53 ಲಕ್ಷ ರೂ., 74 ಲಕ್ಷ ರೂ, 44 ಲಕ್ಷ ರೂ. ಹೀಗೆ ಒಟ್ಟು 1.71 ಕೋಟಿ ರೂ. ವರ್ಗಾಯಿಸಿಕೊಂಡು ಮೋಸ ಮಾಡಿದ್ದಳು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೂರುದಾರರು ಮೂಲತಃ ಮುಂಬೈಯವರಾಗಿದ್ದು ಈ ಮೊದಲು ಅಮೆರಿಕದಲ್ಲಿ ಐಟಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿಂದ ವಾಪಾಸಾದ ಬಳಿಕ ಮಂಗಳೂರಿನಲ್ಲಿ ಪ್ಲಾಟ್ ಒಂದನ್ನು ಖರೀದಿಸಿ ವಾಸವಾಗಿದ್ದರು ಅವಿವಾಹಿತರಾಗಿದ್ದು, ಒಬ್ಬರೇ ಇದ್ದರು. ಉದ್ಯೋಗದ ಮೂಲಕ ಮಾಡಿದ ಉಳಿತಾಯದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Edited By : PublicNext Desk
Kshetra Samachara

Kshetra Samachara

22/11/2024 01:58 pm

Cinque Terre

2.2 K

Cinque Terre

0

ಸಂಬಂಧಿತ ಸುದ್ದಿ