ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಗ್ರಾಮೀಣ ಪ್ರದೇಶಗಳಿಗೆ ಮೊಬೈಲ್ ನೆಟ್ ವರ್ಕ್ ವಿಸ್ತರಿಸಿ : ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಮೊಬೈಲ್ ನೆಟ್‍ವರ್ಕ್ ಸೇವೆ ಲಭ್ಯವಾಗದಿರುವ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿವಿಧ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಯುವಕರಿಗೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಮೊಬೈಲ್ ನೆಟ್‍ವರ್ಕ್ ದೊರಕಿಸಿಕೊಡಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ.

ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ವಿವಿಧ ಮೊಬೈಲ್ ಕಂಪನಿಗಳ ನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಮಲೆನಾಡು ಪ್ರದೇಶ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ಈಗಾಗಲೇ ಗುರುತಿಸಲಾದ ಅನೇಕ ಸ್ಥಳಗಳಲ್ಲಿ ಬಿ.ಎಸ್.ಎನ್.ಎಲ್. ಸ್ಥಾವರಗಳನ್ನು ನಿರ್ಮಿಸಿ ಸೇವೆ ಒದಗಿಸುತ್ತಿದೆ. ಆದರೆ, ಬಿ.ಎಸ್.ಎನ್.ಎಲ್.ನ ಸೇವೆ ನಿರೀಕ್ಷಿಸದಷ್ಟು ಪ್ರಮಾಣದಲ್ಲಿ ಜನರಿಗೆ ದೊರಕದಿರುವುದರಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಸ್ಥಳಗಳಲ್ಲಿ ಏರ್‍ಟೆಲ್, ಜಿಯೋ ಸೇರಿದಂತೆ ಬೇರೆಬೇರೆ ಮೊಬೈಲ್ ಕಂಪನಿಗಳ ನಿರ್ವಾಹಕರೂ ಕೂಡ ತಮ್ಮ ಸೇವೆಯನ್ನು ಜನನಿಬಿಡ ಸ್ಥಳಗಳಲ್ಲದೇ ಗ್ರಾಮೀಣ ಪ್ರದೇಶಗಳಲ್ಲಿಯೂ ಉಭಯ ಕಂಪನಿಗಳ ನಡುವೆ ಒಡಂಬಡಿಕೆ ಮಾಡಿಕೊಂಡು ತಮ್ಮ ಸೇವಾ ವಲಯವನ್ನು ವಿಸ್ತರಿಸಿಕೊಳ್ಳುವಂತೆ ಸೂಚಿಸಿದರು.

ಅನ್ಯ ಕಂಪನಿಗಳ ಮುಖ್ಯಸ್ಥರು ತಾವು ಮೊಬೈಲ್ ಸೇವೆ ಒದಗಿಸುವ ಸ್ಥಾವರಗಳನ್ನು ನಿರ್ಮಿಸುವ ಮುನ್ನ ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿದಲ್ಲಿ ಜಿಲ್ಲಾಡಳಿತದ ವತಿಯಿಂದ ತಮಗೆ ಅಗತ್ಯವಿರುವ ಭೂಮಿ, ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಣ್ಣಪುಟ್ಟ ನ್ಯೂನತೆಗಳ ನಡುವೆಯೂ ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ವಿವಿದ ಕಂಪನಿಗಳ ನೆಟ್‍ವರ್ಕ್ ಸೇವೆ ಒದಗಿಸಲಾಗುತ್ತಿದೆ. ಅಂತೆಯೇ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಸೇವೆ ಒದಗಿಸುವ ಬಗ್ಗೆ ಇರುವ ಸಾಧ್ಯತೆಗಳ ಬಗ್ಗೆಯೂ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳು ಮೊಬೈಲ್ ನೆಟ್‍ವರ್ಕ್ ನಿರ್ವಾಹಕ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

Edited By : Abhishek Kamoji
Kshetra Samachara

Kshetra Samachara

22/11/2024 02:35 pm

Cinque Terre

4.72 K

Cinque Terre

0

ಸಂಬಂಧಿತ ಸುದ್ದಿ