ಧಾರವಾಡ: ವಕ್ಫ್ ಬೋರ್ಡ್ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಇಡೀ ದಿನ ಧರಣಿ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಟೆಂಟ್ ಹಾಕಿ ಧರಣಿ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ನಡು ರಸ್ತೆಯಲ್ಲೇ ಭಜನೆ ಮಾಡುವ ಮೂಲಕ ಗಮನ ಸೆಳೆದರು.
ರೈತರ ಜಮೀನು ಹಾಗೂ ಹಿಂದೂ ಧರ್ಮದ ಕೆಲ ದೇವಾಲಯಗಳು ವಕ್ಫ್ ಬೋರ್ಡ್‌ಗೆ ಒಳಪಟ್ಟಿವೆ ಎಂದು ನಮೂದಾಗಿರುವುದನ್ನು ವಿರೋಧಿಸಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಘಟಕದ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನದ ಧರಣಿ ನಡೆಸಿದರು.
ಪ್ರತಿಭಟನೆ ವೇಳೆ ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ನಡು ರಸ್ತೆಯಲ್ಲೇ ಭಜನೆ ಮಾಡುವ ಮೂಲಕ ಗಮನಸೆಳೆದರು. ಬಿಜೆಪಿಯ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಜನೆಯ ತಾಳ ಬಾರಿಸಿ ಗಮನಸೆಳೆದರು. ಮಾಜಿ ಶಾಸಕ ಅಮೃತ ದೇಸಾಯಿ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Kshetra Samachara
22/11/2024 03:30 pm