ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಮೇಲಿನ ರೇಪ್ ಕೇಸ್‌: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು. ಅದರಂತೆ ಆದೇಶವನ್ನು ಇಂದು ಪ್ರಕಟಿಸಿರುವ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿದೆ.

2021ರಲ್ಲಿ ಬಿಸಿಎಂ ಹಾಸ್ಟೆಲ್‌ನಲ್ಲಿ ಬಾಲಕಿಯರಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸುವ ಕುರಿತು ಚರ್ಚಿಸಲು ಪ್ರಜ್ವಲ್ ಅವರ ಕಚೇರಿಗೆ ಸಂತ್ರಸ್ತೆ ತೆರಳಿದ್ದರು. ಬ್ಯುಸಿ ಇರುವುದರಿಂದ ಮಾರನೆಯ ದಿನ ಬರುವಂತೆ ಪ್ರಜ್ವಲ್ ಸೂಚಿಸಿದ್ದರು. ಅದರಂತೆ ಮಾರನೇಯ ದಿನ ಸಂತ್ರಸ್ತೆ ತೆರಳಿದಾಗ ಆಕೆಗೆ ಗನ್ ತೋರಿಸಿ, ಬೆದರಿಸಿ ಅತ್ಯಾಚಾರ ಎಸಗಿದ್ದರು. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಆನಂತರ ಹಲವು ಬಾರಿ ವಿಡಿಯೋ ಕರೆ ಮಾಡಿ ನಗ್ನವಾಗುವಂತೆ ಸೂಚಿಸಿ, ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದರು. ಈ ವಿಚಾರವನ್ನು ಬಹಿರಂಗಪಡಿಸಿದರೆ ಗಂಭೀರ ಕ್ರಮದ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತೆ ದೂರಿದ್ದರು.

Edited By : Vijay Kumar
PublicNext

PublicNext

22/11/2024 04:22 pm

Cinque Terre

61.5 K

Cinque Terre

3

ಸಂಬಂಧಿತ ಸುದ್ದಿ