ಹಾವೇರಿ : ಹಾವೇರಿ ಜಿಲ್ಲೆ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಏಣಿಕೆಗೆ ಹಾವೇರಿ ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ತಿಳಿಸಿದ್ದಾರೆ. ಹಾವೇರಿ ಸಮೀಪದ ಮತ ಏಣಿಕೆ ಕೇಂದ್ರದಲ್ಲಿ ಮಾತನಾಡಿದ ಅವರು ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬರಲಿದೆ ಎಂದು ತಿಳಿಸಿದರು.
ಹಾವೇರಿ ತಾಲೂಕು ದೇವಗಿರಿ ಗ್ರಾಮದ ಬಳಿ ಇರುವ ಸರ್ಕಾರಿ ಇಂಜನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ದತೆ ಮಾಡಲಾಗಿದೆ. ಬೆಳಿಗ್ಗೆ 7.30 ಕ್ಕೆ ಸ್ಟ್ರಾಂಗ್ ರೂಂ ಓಪನ್ ಮಾಡಲಾಗುತ್ತದೆ.
ಬೆಳಿಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ಸುರುವಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತಗಳ ಎಣಿಕೆ ಕಾರ್ಯ ನಡೆಯಲಿದೆ.ಇವಿಎಂ ಮತಗಳ ಎಣಿಕೆಗಾಗಿ ಒಟ್ಟು 14 ಟೇಬಲ್ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
1 ಟೇಬಲ್ ನಲ್ಲಿ ಅಂಚೆ ಮತ,ಸೇವಾ ಮತದಾರರ ಅಂಚೆ ಮತ ಎಣಿಕೆ ಮಾಡಲಾಗುತ್ತದೆ.
ಪ್ರತಿ ಟೇಬಲ್‌ಗೆ ಒಬ್ಬರು ಎಣಿಕೆ ಮೇಲ್ವಿಚಾರಕರು, ಒಬ್ಬರು ಎಣಿಕೆ ಸಹಾಯಕರು ಒಬ್ಬರು ಎಣಿಕೆ ಮೈಕ್ರೋ ಅಬ್ಸರವರ್ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬೈಟ್ ಡಾ.ವಿಜಯಮಹಾಂತೇಶ ದಾನಮ್ಮನವರ್, ಹಾವೇರಿ ಜಿಲ್ಲಾಧಿಕಾರಿ
PublicNext
22/11/2024 04:23 pm