ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ವಿದ್ಯಾರ್ಥಿಗಳ ಬದುಕಿಗೆ ಪ್ರತಿಭಾ ಕಾರಂಜಿಅವಶ್ಯಕ - ಗುಣನಾಥಸ್ವಾಮೀಜಿ

ಚಿಕ್ಕಮಗಳೂರು: ಮಕ್ಕಳಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅರಿವಿಲ್ಲದೇ ಹುದುಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಪಾಲಕರು ಹಾಗೂ ಶಿಕ್ಷಕರ ಕರ್ತವ್ಯ ಎಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಕಾರ್ಯದರ್ಶಿ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಜಿ.ಪಂ. ತಾ.ಪಂ., ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಮನ್ವಯ ಸಂಪನ್ಮೂಲ ಕೇಂದ್ರ ಸಹಯೋಗದಲ್ಲಿ ನಗರದ ಹೌಸಿಂಗ್ ಬೋರ್ಡ್ ಸಮೀಪ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ಧ ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಬಾಲ್ಯದಿಂದಲ್ಲೇ ಒಂದೊಲ್ಲೊಂದು ವಿಷಯಗಳಲ್ಲಿ ಆಸಕ್ತಿ ಹೊಂದಿರುವುದು ಸಹಜ. ಆ ಕಲಾಸಕ್ತಿಯನ್ನು ಸಮಾಜದ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ. ಹೀಗಾಗಿ ವಿದ್ಯಾರ್ಥಿಗಳ ಜೀವನದಲ್ಲೇ ಕಲೆಯನ್ನು ಪ್ರೋತ್ಸಾಹಿಸಿ ಗೌರವಿಸುವ ಕಾರ್ಯವಾಗಬೇಕಿದೆ ಎಂದರು.

Edited By : PublicNext Desk
Kshetra Samachara

Kshetra Samachara

22/11/2024 06:04 pm

Cinque Terre

620

Cinque Terre

0

ಸಂಬಂಧಿತ ಸುದ್ದಿ