ಚಿಕ್ಕಮಗಳೂರು: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಗಳು ಜನಸಾಮಾನ್ಯರಿಗೆ ಅಕ್ಷಯ ಪಾತ್ರೆಗಳಿದ್ದಂತೆ, ಫಲಾನುಭವಿಗಳು ಕೇಳುವ ಸೌಲಭ್ಯಗಳನ್ನು ಒದಗಿಸುವ ಮೂಲಕ ನಿರಂತರ ಸ್ಪಂದಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಹೇಳಿದರು.
ನಗರದ ಬ್ರಹ್ಮ ಕುಮಾರೀಸ್ ಈಶ್ವರಿಯ ವಿದ್ಯಾಮಂದಿರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಧರ್ಮಸ್ಥಳ ಸಂಘಗಳಲ್ಲಿ ವಾರದ ಸಭೆ ನಿರಂತರವಿರಬೇಕು. ಇದರಿಂದ ಯೋಜನೆಗಳ ಕಾರ್ಯಕ್ರಮ, ಆಗುಹೋಗುಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳಲು ಸಹಕಾರಿ ಎಂದ ಅವರು ಸುಜ್ಞಾನ, ನಿಧಿ, ಮಾಸಾಶನ , ವಾತ್ಸಲ್ಯ ಕಾರ್ಯಕ್ರಮ, ಆರೋಗ್ಯ-ಸಂಪೂರ್ಣ ಸುರಕ್ಷಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
Kshetra Samachara
22/11/2024 06:21 pm