ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿ: ನಕ್ಸಲ್ ಎನ್ಕೌಂಟರ್ ಕೇಸ್‌ನಲ್ಲಿ ಜಯಂತ್ ಗೌಡರ ವಿಚಾರಣೆ - ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಹೆಬ್ರಿ: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಪೀತುಬೈಲ್ ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್ ಪ್ರಕರಣದ ತನಿಖೆಯ ಕುರಿತಾಗಿ ಘಟನೆ ನಡೆದ ಸ್ಥಳದ ನಿವಾಸಿ ಜಯಂತ್ ಗೌಡರವರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಪಡಿಸಿಕೊಂಡಿದ್ದು, ಈ ಕುರಿತು ಗ್ರಾಮಸ್ಥರು ವಿರೋಧಿಸಿ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಇಂದು ನಡೆದಿದೆ.

ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಇಂದು ಬೆಳಗ್ಗೆ ಹೆಬ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಜಯಂತ ಗೌಡರವರನ್ನು ವಶಪಡಿಸಿಕೊಂಡು ಹೆಬ್ರಿ ಠಾಣೆಗೆ ಕರೆ ತಂದಿದ್ದಾರೆ.

ಆತ ಅಮಾಯಕ, ಆತನಿಗೆ ಏನು ತಿಳಿದಿಲ್ಲ, ಅಂತವನನ್ನು ಯಾಕೆ ಠಾಣೆಗೆ ಕರೆದುಕೊಂಡು ಬಂದಿದ್ದೀರಿ, ಅಲ್ಲಿಯೇ ವಿಚಾರಿಸಬಹುದಿತ್ತಲ್ವ ಎಂದು ಮಲೆಕುಡಿಯ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಠಾಣಾಧಿಕಾರಿ ಅವರಲ್ಲಿ ಮನವಿ ಮಾಡಿ ಆತನನ್ನು ಕೂಡಲೇ ಬಿಡುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಠಾಣಾಧಿಕಾರಿ ಮಹೇಶ್ ಟಿ. ಅವರು, ಮೇಲಾಧಿಕಾರಿಗಳಲ್ಲಿ ವಿಚಾರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಮಲೆ ಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್‌ ಗೌಡ ಈದು, ಉಡುಪಿ ಜಿಲ್ಲಾ ಮಲೆ ಕುಡಿಯ ಸಂಘದ ಅಧ್ಯಕ್ಷ ಗಂಗಾಧರ್‌ ಗೌಡ, ಪೂರ್ವಾಧ್ಯಕ್ಷ ಸುಧಾಕರ ಗೌಡ ನಾಡ್ಪಾಲು, ಹೆಬ್ರಿ ಗ್ರಾಮ ಪಂಚಾಯತಿ ತಾರನಾಥ್, ನಾಡ್ಪಾಲು ಗ್ರಾ. ಪಂ. ಅಧ್ಯಕ್ಷ ನವೀನ್‌ ಕುಮಾರ್‌, ವಿಜಯ ಶೆಟ್ಟಿ, ಸುಧಾಕರ್‌ ಹೆಗ್ಡೆ ಸೇರಿದಂತೆ ಗ್ರಾಮಸ್ಥರು ಠಾಣೆಯಲ್ಲಿ ಜಮಾಯಿಸಿದ್ದಾರೆ.

Edited By : Vijay Kumar
PublicNext

PublicNext

22/11/2024 07:21 pm

Cinque Terre

9.24 K

Cinque Terre

0

ಸಂಬಂಧಿತ ಸುದ್ದಿ