ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿಕ್ರಂ ಗೌಡ ಎನ್‌ಕೌಂಟರ್ ಪ್ರಕರಣ-ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ದಸಂಸ ಡಿಸಿಗೆ ಮನವಿ

ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.ಹೆಬ್ರಿ ತಾಲೂಕಿನ ಕಬ್ಬಿನಾಲೆ ಪೀತಬೈಲು ಎಂಬಲ್ಲಿ ನಕ್ಸಲ್ ಕಮಾಂಡರ್ ಎಂದು ಗುರುತಿಸಿಕೊಂಡಿರುವ ವಿಕ್ರಂ ಗೌಡ ನಕ್ಸಲ್ ನಿಗ್ರಹ ದಳದ ಎನ್‌ಕೌಂಟರ್‌ನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಇವರು ಪರಿಶಿಷ್ಟ ವರ್ಗಕ್ಕೆ ಸೇರಿದ ವ್ಯಕ್ತಿಯಾಗಿದ್ದು, ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಈ ಕಾರ್ಯಾಚರಣೆಯ ಬಗ್ಗೆ ಹಲವು ಮಂದಿ ಅನುಮಾನ ವ್ಯಕ್ತಪಡಿಸಿ, ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಆದುದರಿಂದ ವಿಕ್ರಂ ಗೌಡ ಅವರ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಕಂಡುಕೊಂಡು ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ನ್ಯಾಯ ಒದಗಿಸಿಕೊಡಬೇಕೇಂದು ದಸಂಸ ಮನವಿಯಲ್ಲಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ದ.ಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದ‌ರ್ ಮಾಸ್ತರ್, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಶ್ಯಾಮ್ ಸುಂದರ್ ತೆಕ್ಕಟ್ಟೆ, ಮಂಜುನಾಥ್ ನಾಗೂರು, ಸುರೇಶ್ ಹಕ್ಲಾಡಿ, ಸಲಾಹುದ್ದೀನ್ ಶೇಖ್, ಅಝೀಝ್ ಉದ್ಯಾವರ, ಇದ್ರೀಸ್ ಹೂಡೆ ಮೊದಲಾದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/11/2024 08:01 pm

Cinque Terre

1.02 K

Cinque Terre

0

ಸಂಬಂಧಿತ ಸುದ್ದಿ