ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಗೃಹ ಸಚಿವರೇ, ಸಿ.ಟಿ.ರವಿ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಿ- ದಲಿತ ಸಂಘಟನೆ ಒಕ್ಕೂಟ

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಕಿಡಿಕಾರಿದ್ದಾರೆ. ಎರಡು ದಿನದ ಹಿಂದೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿ.ಟಿ. ರವಿಯವರು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದವು ಎಂದು ಅಧಿಕಾರಿಗಳ ಸಮ್ಮುಖದಲ್ಲಿ ಹೇಳಿದ್ದಾರೆಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಖಂಡಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ಬಹುತೇಕ ದಲಿತ ಸಮುದಾಯದ ವಿದ್ಯಾರ್ಥಿಗಳೇ ಇರುವುದರಿಂದ ಸಮುದಾಯಕ್ಕೆ ನಕ್ಸಲ್ ಪಟ್ಟ ಕಟ್ಟಲು ಮುಂದಾದಂತಿವೆ ಎಂದು ಆರೋಪಿಸಿದ್ದಾರೆ. ಗೃಹ ಸಚಿವರು ತಕ್ಷಣ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿವೆ. ಅಲ್ಲದೇ ಸಿ.ಟಿ.ರವಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು, ಇಲ್ಲದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Edited By : Vinayak Patil
PublicNext

PublicNext

22/11/2024 09:54 pm

Cinque Terre

20.71 K

Cinque Terre

0

ಸಂಬಂಧಿತ ಸುದ್ದಿ