ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್ ಬಗ್ಗೆ ಗೊಂದಲ ಮೂಡಿಸಿದೆ, ಬಡವರು ಪರಿತಪಿಸುವಂತಾಗಿದೆ – ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ರಾಜ್ಯ ಸರ್ಕಾರ ರೇಷನ್ ಕಾರ್ಡ್ ಬಗ್ಗೆ ಗೊಂದಲ ಮೂಡಿಸಿದ್ದು, ಬಡವರು ಪರಿತಪಿಸುವಂತಾಗಿದೆ. ಕೂಡಲೇ ಇದನ್ನು ಸರಿಪಡಿಸಬೇಕು ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಗೊಂದಲ ಹುಟ್ಟಿಸುತ್ತಿದೆ. ಗೊಂದಲ ಪರಿಹಾರ ಮಾಡುವ ನಿಟ್ಟಿನಲ್ಲಿ ವೇಗವಾಗಿ ಕೆಲಸ ಮಾಡಬೇಕಾಗಿದೆ. ಒಬ್ಬೊಬ್ಬ ಸಚಿವರು ಒಂದೊಂದು ರೀತಿ ಹೇಳಿಕೆ ನೀಡುತ್ತಿದ್ದಾರೆ. ಸಚಿವ ಮುನಿಯಪ್ಪನವರು ವಾರದಲ್ಲಿ ಬಗೆಹರಿಸುವುದಾಗಿ ಹೇಳಿದ್ದಾರೆ. ಬಗೆಹರಿಸದಿದ್ದರೆ ಬಡವರನ್ನು ಸಂಘಟಿಸಿ ರಾಷ್ಟ್ರಭಕ್ತರ ಬಳಗದಿಂದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರು ಆದಾಯ ತೆರಿಗೆ ಪಾವತಿದಾರರ ಕಾರ್ಡ್ ರದ್ದು ಮಾಡಿದರೆ ಬೇಸರವಿಲ್ಲ. ಆದರೆ ಬಡವರ ಕಾರ್ಡ್‌ನ ಸುದ್ದಿಗೆ ಬಂದರೆ ಪರಿಣಾಮ ಸರಿ ಇರುವುದಿಲ್ಲ. ಬಡವರ ಹೊಟ್ಟೆಗೆ ಕಲ್ಲು ಹಾಕುವ ಕೆಲಸ ಮಾಡಬೇಡಿ ಎಂದು ಎಚ್ಚರಿಸಿದ್ದಾರೆ. ವೃದ್ಧಾಪ್ಯ ವೇತನ, ರೇಷನ್, ಆಸ್ಪತ್ರೆ ಸೇರಿದಂತೆ ಹಲವು ಸೌಲಭ್ಯಗಳಿಗೆ ರೇಷನ್ ಕಾರ್ಡ್ ರದ್ದು ಮಾಡುವುದರಿಂದ ತೊಂದರೆಯಾಗಲಿದೆ. ಜಿಲ್ಲಾಧಿಕಾರಿಗಳು ಈ ನಿಟ್ಟಿನಲ್ಲಿ ಕೂಡಲೇ ಗಮನಹರಿಸಬೇಕು. ನಮ್ಮ ಜಿಲ್ಲೆಯಲ್ಲಿ 3.80ಲಕ್ಷ ಬಿಪಿಎಲ್ ಕಾರ್ಡ್ ಗಳಿವೆ, 2 ಸಾವಿರಕ್ಕೂ ಅಧಿಕ ಬಿಪಿಎಲ್ ಕಾರ್ಡ್‍ಗಳು ರದ್ದಾಗಿವೆ. ಕೇಂದ್ರ ಸರ್ಕಾರದ ನೀತಿಯಿಂದ ನಮಗೆ ಸಮಸ್ಯೆ ಆಗಿದೆ ಎಂದು ಕೇಂದ್ರದ ಮೇಲೆ ತಪ್ಪು ಹೊರಿಸುತ್ತಿದ್ದಾರೆ. ಶ್ರೀಮಂತರನ್ನು ಹುಡುಕಿ ನಿಮ್ಮ ಖಜಾನೆಯನ್ನು ಭರ್ತಿ ಮಾಡಿಕೊಳ್ಳಿ, ಆದರೆ ಬಡವರ ಹೊಟ್ಟೆ ಮೇಲೆ ಏಕೆ ಹೊಡೆಯುತ್ತಿರಾ ಎಂದು ಪ್ರಶ್ನೆ ಈಶ್ವರಪ್ಪ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

Edited By : Vinayak Patil
PublicNext

PublicNext

22/11/2024 10:07 pm

Cinque Terre

20.16 K

Cinque Terre

1

ಸಂಬಂಧಿತ ಸುದ್ದಿ