ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಅವಳಿನಗರದಲ್ಲಿ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸರ್ಕಾರಿ ನೌಕರರು ಸಾರ್ವಜನಿಕರಿಗೆ ಲಭ್ಯವಾಗುವುದು ಬಹಳ ವಿರಳವಾಗಿದೆ. ಜನರು ಯಾವುದಾದರೂ ಕುಂದುಕೊರತೆಗಳ ಮನವಿ ಸಲ್ಲಿಸಲು ಹೋದರೇ ಕಚೇರಿಯಲ್ಲಿ ಯಾರೊಬ್ಬರೂ ಇಲ್ಲದೇ ಇರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ.
ಹುಬ್ಬಳ್ಳಿಯ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಒಬ್ಬ ಸಿಬ್ಬಂದಿಯಾಗಲೀ, ಅಧಿಕಾರಿಗಳಾಗಲಿ ಇಲ್ಲದೇ ಇರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು..ಇಂತಹದೊಂದು ಅವ್ಯವಸ್ಥೆಯನ್ನು ದಲಿತ ವಿಮೋಚನಾ ಸಮಿತಿಯ ಮುಖಂಡರು ಬಯಲಿಗೆ ಎಳೆದಿದ್ದು, ಲೋಕೋಪಯೋಗಿ ಇಲಾಖೆಯಲ್ಲಿ ಯಾವುದೇ ಒಬ್ಬ ಸಿಬ್ಬಂದಿಯಾಗಲೀ, ಅಧಿಕಾರಿಯಾಗಲಿ ಜನರ ಅಹವಾಲು ಆಲಿಸಲು ಅಥವಾ ಸೂಚನೆ ನೀಡಲು ಇಲ್ಲದೇ ಇರುವುದು ನಿಜಕ್ಕೂ ಚಿಂತಾಜನಕ ಸಂಗತಿಯಾಗಿದೆ.
ಈ ಹಿಂದೇ ಬಹುತೇಕ ಪಾಲಿಕೆ ವಲಯ ಕಚೇರಿಯಲ್ಲಿ ಸಿಬ್ಬಂದಿ ಕಾಣದೇ ಇರುವ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಗಳನ್ನು ಬಿತ್ತರಿಸಿತ್ತು. ಈಗ ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಯಾರೊಬ್ಬರೂ ಇಲ್ಲದೇ ಇರುವುದು ಎಷ್ಟರ ಮಟ್ಟಿಗೆ ಸರಿ" ಎಂಬುವುದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. ಅಲ್ಲದೇ ಕಚೇರಿಯ ಕೆಲಸದ ಅವಧಿಯಲ್ಲಿಯೇ ಕಚೇರಿ ಖಾಲಿ ಹೊಡೆಯುತ್ತಿದ್ದು, ಈ ಬಗ್ಗೆ ಇಲಾಖೆಯ ಸಚಿವರು ಕಣ್ಣು ತೆರೆದು ನೋಡಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
23/11/2024 11:49 am