ಕೊಡಗು: ಜಿಲ್ಲೆಯ ಪ್ರಾಥಮಿಕ ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸುವಂತೆ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ತಿಳಿಸಿದ್ದಾರೆ.
ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳು ಕೃಷಿಕರ ಬೆನ್ನುಲುಬಾಗಿದ್ದು, ಸಹಕಾರ ಸಂಘಗಳನ್ನು ಪ್ರತಿಯೊಬ್ಬರೂ ಬಲಪಡಿಸಲು ಮುಂದಾಗಬೇಕು. ಸಹಕಾರ ಸಂಘಗಳು ಉಳಿದಲ್ಲಿ ಕೃಷಿಕರಿಗೆ ಸಹಕಾರಿಯಾಗಲಿದೆ ಎಂದು ಕೆ.ಎನ್.ರಾಜಣ್ಣ ಅವರು ಹೇಳಿದರು.
ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಅವಕಾಶವಿದ್ದು, ಅಗತ್ಯ ಇದ್ದಲ್ಲಿ ಈ ಸಂಬಂಧ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಾಪಿಸಲು ಸೂಕ್ತ ಕ್ರಿಯಾಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಬಹುದಾಗಿದೆ ಎಂದು ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ತಿಳಿಸಿದ್ದಾರೆ.
Kshetra Samachara
23/11/2024 01:35 pm