ನವಲಗುಂದ: ವಿದ್ಯಾರ್ಥಿ-ವಿದ್ಯಾರ್ಥಿನಿಯರು ಯಾವುದೇ ಅನ್ಯ ವಿಷಯಗಳತ್ತ ಮನಸ್ಸು ಹರಿಬಿಡದೆ ವಿದ್ಯಾಭ್ಯಾಸದ ಕಡೆ ಗಮನ ನೀಡಬೇಕು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೇವಲ ಉತ್ತೀರ್ಣರಾದರೆ ಸಾಲದು, ಉನ್ನತ ಮಟ್ಟದಲ್ಲಿ ಉತ್ತೀರ್ಣರಾಗಿ ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತರಬೇಕು ಎಂದು ಹುಬ್ಬಳ್ಳಿ ಬಿವಿಬಿ ಕಾಲೇಜು ಸಹಪ್ರಾಧ್ಯಾಪಕರಾದ ಗುರುಬಸಯ್ಯಾ ಡೋಣರಮಠ ಹೇಳಿದರು.
ಪಟ್ಟಣದ ಮಾಡೆಲ್ ಹೈಸ್ಕೂಲ್ ನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ಮುಖ್ಯ ಪರೀಕ್ಷೆಗಳು ಕೆಲವೇ ತಿಂಗಳುಗಳಿದ್ದು, ವಿದ್ಯಾರ್ಥಿಗಳು ಒಂದು ನಿಮಿಷವನ್ನು ವ್ಯರ್ಥ ಮಾಡದೆ ವ್ಯಾಸಂಗದತ್ತ ಗಮನ ಹರಿಸಬೇಕು ಮೊಬೈಲ್, ಟಿವಿಯಿಂದ ದೂರವಿರಬೇಕು ಎಂದರು.
ಶಾಲೆ ಮುಖ್ಯಾಧ್ಯಾಪಕರಾದ ಜಿ. ಎಮ್ ಮಾಕಣ್ಣವರ ಮಾತನಾಡಿ ವ್ಯಕ್ತಿ, ವ್ಯಕ್ತಿತ್ವ ವಿಕಸನ ಶಿಬಿರಗಳು ಮಕ್ಕಳ ಭವಿಷ್ಯದ ಬೆಳವಣಿಗೆಗೆ ಪೂರಕವಾಗಲಿದೆ. ಇಂತಹ ಶಿಬಿರಗಳು ಮಕ್ಕಳಲ್ಲಿ ಇರುವ ಅಗಾಧ ಶಕ್ತಿ, ಸಾಮರ್ಥ್ಯ ತೋರಲು ಸಹಾಯಕವಾಗಲಿದೆ ಎಂದರು.
ನಂತರ ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವ ರೀತಿ ಎದುರಿಸಬೇಕು ಎಂಬುದರ ಕುರಿತು ಸಂವಾದ ನಡೆಸಿದರು.
ಶಾಲೆ ನಿರ್ದೇಶಕರಾದ ಎನ್ ಆರ್ ಇನಾಮತಿ, ಎ ಎಸ್ ಬಾಗಿ, ಶಂಕರಗೌಡ ಮುದಿಗೌಡ್ರ, ಶಿಕ್ಷಕರಾದ ಎಸ್ ಎನ್ ಲಮಾಣಿ, ಎಸ್ ಬಿ ಕಲಾವಂತ, ಸಿ. ಎಮ್ ಕಟಗಿ ಸೇರಿ ಶಾಲೆ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.
Kshetra Samachara
23/11/2024 01:49 pm