ಸಿದ್ದಾಪುರ: ನಮಗೆ ಅನ್ನ ನೀಡುವ ಅನ್ನದಾತನಿಗೆ ಸರಿಯಾದ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ. ರೈತನಿಗೆ ಬೇಕಾದ ಸೌಕರ್ಯಗಳು ಸಿಕ್ಕಾಗ ಮಾತ್ರ ರೈತರು ನೆಮ್ಮದಿಯಿಂದ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ಸಾಧ್ಯ. ಗ್ರಾಮೀಣ ಭಾಗದ ಬಡ ಜನರಿಗೆ ಆರ್ಥಿಕ ಸಹಾಯ ದೊರೆತು ಸಾಧೃಢರಾದಾಗ ಮಾತ್ರ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ಅರಿತ ವೀರೇಂದ್ರ ಹೆಗ್ಗಡೆ ಗ್ರಾಮಾಭಿವೃದ್ಧಿ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಪ್ರಣೀತಾ ಯಕ್ಷ ನೃತ್ಯ ಪ್ರದರ್ಶಿಸಿದಳು. ಸಭಾ ಕಾರ್ಯಕ್ರಮಕ್ಕೂ ಮೊದಲು ಜೇಡಗೆರೆ ಕೆರೆಗೆ ಶಾಸಕ ಭೀಮಣ್ಣ ನಾಯ್ಕ ಬಾಗಿನ ಸಮರ್ಪಣೆ ಮಾಡಿದರು. ಗ್ರಾಮದ ನೂರಕ್ಕೂ ಹೆಚ್ಚು ಮಹಿಳೆಯರು ಪೂರ್ಣಕುಂಭದೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.
Kshetra Samachara
23/11/2024 02:36 pm