ಬೆಂಗಳೂರು: ಚನ್ನಪಟ್ಟಣದ ಫಲಿತಾಂಶವನ್ನು ನಿಖಿಲ್ ಕುಮಾರಸ್ವಾಮಿ ಅವರ ಸೋಲು ಎಂದು ನಾನು ಹೇಳುವುದಿಲ್ಲ ಎಂದ ಡಿಕೆಶಿ, ಅವರ ತಂದೆ ಕುಮಾರಸ್ವಾಮಿ ಅವರು ಆ ಕ್ಷೇತ್ರದಿಂದ ಮುಖ್ಯಮಂತ್ರಿಯಾಗಿದ್ದರು. ಅವರು ಆ ಕ್ಷೇತ್ರದಲ್ಲಿ ಬಿಟ್ಟು ಹೋದ ಗುರುತಿಗೆ ಜನ ತೀರ್ಪು ನೀಡಿದ್ದಾರೆ ಅಂತ ಹರಿಹಾಯ್ದಿದ್ದಾರೆ..
ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸೋಲು ಎಂದು ಹೇಳುವುದಿಲ್ಲ. ಮುಖ್ಯಮಂತ್ರಿಯಾಗಿ ಅವರು ಆ ಕ್ಷೇತ್ರದಲ್ಲಿ ಮಾಡಿರುವ ಕೆಲಸದ ಮೇಲೆ ಮತ ನೀಡಿದ್ದಾರೆ. ಸಂಡೂರಿನಲ್ಲಿ ಮೊದಲಿನಿಂದ ಕಾಂಗ್ರೆಸ್ ಗೆಲ್ಲುತ್ತಾ ಬಂದಿದೆ. ಈ ಮೂರು ಕ್ಷೇತ್ರಗಳಲ್ಲಿ ಗ್ಯಾರಂಟಿ ಹಾಗೂ ಅಭಿವೃದ್ಧಿಗೆ ಜನ ಮತ ನೀಡಿದ್ದಾರೆ. ವಿರೋಧ ಪಕ್ಷಗಳ ನಾಯಕರ ಟೀಕೆ ನೀವು ಗಮನಿಸಿದ್ದೀರಿ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ನಾನು ಈ ಹಿಂದೆ ಹೇಳಿದ್ದೆ. ಇಂದು ಅದು ಸಾಬೀತಾಗಿದೆ” ಎಂದು ಹೇಳಿದರು.
ವಿರೋಧ ಪಕ್ಷಗಳ ನಾಯಕರು ಮುಖ್ಯಮಂತ್ರಿಗಳು, ಮಂತ್ರಿಗಳ ಮೇಲೆ ಸುಳ್ಳು ಆರೋಪ ಮಾಡುವುದನ್ನು ನಿಲ್ಲಿಸಬೇಕು. ಸತ್ಯಾಂಶವಿದ್ದರೆ ನಮ್ಮನ್ನು ತಿದ್ದುವ ಪ್ರಯತ್ನ ಮಾಡಲಿ. ಆದರೆ ಸುಳ್ಳನ್ನೇ ಮನೆ ದೇವರು ಎಂದು ಪರಿಗಣಿಸಿ ಜನರ ತಲೆಗೆ ತುಂಬಲು ಹೋದರೆ ಕೆಲಸಕ್ಕೆ ಬರುವುದಿಲ್ಲ. ಬೊಮ್ಮಾಯಿ ಅವರ ಕ್ಷೇತ್ರದಲ್ಲಿ 14 ಸಾವಿರ ಮತಗಳ ಅಂತರ ಬಂದಿದೆ. ಈ ಚುನಾವಣೆ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹಳೇ ಮೈಸೂರು ಭಾಗದಲ್ಲಿ ನಡೆದಿದೆ. ಈ ಭಾಗದಲ್ಲಿ ಆಯ್ಕೆಯಾದ ಕೇಂದ್ರ ಮಂತ್ರಿಗಳು ಎನ್ ಡಿಎ ಮೈತ್ರಿ ಹೆಸರಲ್ಲಿ ಚುನಾವಣೆ ಮಾಡಿದ್ದರು ಎಂದರು.
PublicNext
23/11/2024 02:49 pm