ಮಾಲೂರು : ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿಗಳಿಸಿದ್ದು, ಕೋಲಾರದ ಮಾಲೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಸಿದರು.
ಮಾಲೂರು ಶಾಸಕ ಕೆ.ವೈ.ನಂಜೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ಮಾಡಿದರು. ಸ್ವತಃ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಕಾರ್ಯಕರ್ತರಿಗೆ ಸಿಹಿ ತಿನ್ನಿಸಿದರು. ನೂರಾರು ಕಾರ್ಯಕರ್ತರು, ಕಾಂಗ್ರೆಸ್ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
Kshetra Samachara
23/11/2024 04:42 pm