ವಿಜಯಪುರ: ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಮನೆಯಲ್ಲಿರುವ ಟಿವಿ ಒಡೆದು ಆಕ್ರೋಶ ಹೊರಹಾಕಿದ್ದಾನೆ.
ಹೌದು ! ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪಾ ಭಾಗಿ ಮನೆಯಲ್ಲಿ ಕುಳಿತು ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆ ಫಲಿತಾಂಶ ನೋಡುತ್ತಿದ್ದ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿ ಬಿಜೆಪಿ ಅಭ್ಯರ್ಥಿಗಳಿಗೆ ಸೋಲಾಗಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಮನೆಯಲ್ಲಿರುವ ಟಿವಿ ಒಡೆದು ಮತ್ತೆ ಟಿವಿ ಮೇಲೆ ಕಲ್ಲೆಸೆದು ಆಕ್ರೋಶ ಹೊರಹಾಕಿದ್ದಾನೆ.
ರಾಜ್ಯದ ಬಿಜೆಪಿ ನಾಯಕರಲ್ಲಿ ಒಮ್ಮತ ಇಲ್ಲದ ಹಿನ್ನಲೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಬಿಜೆಪಿ ರಾಷ್ಟ್ರೀಯ ನಾಯಕರು ಇದನ್ನೆಲ್ಲ ಸರಿಪಡಿಸಬೇಕು ಎಂದು ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.
ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ್, ವಿಜಯಪುರ
PublicNext
23/11/2024 04:53 pm