ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 'ಅರ್ಹ ಕುಟುಂಬಗಳ ಬಿಪಿಎಲ್ ಕಾರ್ಡ್ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ' - ಪದ್ಮರಾಜ್ ಆ‌ರ್. ಪೂಜಾರಿ

ಮಂಗಳೂರು: ಬಿಜೆಪಿ ವಿನಾಕಾರಣ ಗೊಂದಲ ಸೃಷ್ಟಿಸುತ್ತಿದೆಯೇ ಹೊರತು ಯಾವುದೇ ಕಾರಣಕ್ಕೂ ದ.ಕ.ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅರ್ಹ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದಾಗುವುದಿಲ್ಲ. ಒಂದು ವೇಳೆ ಪಡಿತರ ಚೀಟಿಗಳ ಪರಿಷ್ಕರಣೆ ವೇಳೆ ಅಧಿಕಾರಿಗಳ ತಪ್ಪಿನಿಂದ ಸಮಸ್ಯೆಯಾಗಿದ್ದರೂ ಅದನ್ನು ರಾಜ್ಯ ಸರಕಾರ ಸರಿಪಡಿಸುವ ಕೆಲಸ ಮಾಡಲಿದೆ ಎಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಪದ್ಮರಾಜ್ ಆ‌ರ್. ಪೂಜಾರಿ ಭರವಸೆ ನೀಡಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಅನರ್ಹರಿಗೆ ನೀಡಿರುವ ಕಾರ್ಡ್‌ಗಳನ್ನು ಮಾತ್ರವೇ ರದ್ದುಪಡಿಸಲಾಗುತ್ತದೆ. ಕೇಂದ್ರ ಸರಕಾರವು 5.80 ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಆದರೆ ಅದರ ಬಗ್ಗೆ ಚಕಾರವೆತ್ತದ ಬಿಜೆಪಿ ನಾಯಕರು ರಾಜ್ಯದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ವಕ್ಫ್ ಆಸ್ತಿ ವಿಚಾರದಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆದರೆ 2019ರಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ 226 ನೋಟಿಸ್ ನೀಡಿರುವುದರ ಬಗ್ಗೆ ಬಿಜೆಪಿ ನಾಯಕರು ಚಕಾರವೆತ್ತುತ್ತಿಲ್ಲ. ಯಾವುದೇ ಕಾರಣಕ್ಕೂ ರಾಜ್ಯ ಸರಕಾರ ರೈತರು, ದೇವಸ್ಥಾನ, ಮಠ ಮಂದಿರಗಳ ಒಂದಿಂಚೂ ಜಾಗವನ್ನು ಸಾಕ್ಷ್ಯವಿಲ್ಲದೆ ವಕ್ಫ್‌ಗೆ ಹಸ್ತಾಂತರಿಸುವ ಕೆಲಸವನ್ನು ಮಾಡಿಲ್ಲ. ಇನ್ನು ಮುಂದೆ ಮಾಡುವುದಿಲ್ಲ ಎಂದವರು ಹೇಳಿದರು.

ಅದಾನಿ ವಿರುದ್ಧ ಅಮೆರಿಕದ ನ್ಯಾಯ ಇಲಾಖೆ ಮಾಡಿರುವ 2500 ಕೋಟಿ ರೂ.ಗಳ ಲಂಚ ಆರೋಪವು ರಾಷ್ಟ್ರ ಮಟ್ಟದಲ್ಲಿ ದೇಶ ತಲೆತಗ್ಗಿಸುವಂತಾಗಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಪದ್ಮರಾಜ್ ಆಗ್ರಹಿಸಿದರು.

Edited By : Vinayak Patil
PublicNext

PublicNext

23/11/2024 05:08 pm

Cinque Terre

16.16 K

Cinque Terre

4

ಸಂಬಂಧಿತ ಸುದ್ದಿ