ಹುಬ್ಬಳ್ಳಿ: ಪಕ್ಷದ ಕಾರ್ಯಕರ್ತರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹುಬ್ಬಳ್ಳಿಯಲ್ಲಿಂದು ʼದಿ ಸಬರಮತಿ ರಿಪೋರ್ಟ್ʼ ಸಿನಿಮಾ ವೀಕ್ಷಣೆ ಮಾಡಿದರು. ಹುಬ್ಬಳ್ಳಿಯ ಲಕ್ಷ್ಮೀ ಪ್ರೈಡ್ ಪಿವಿಆರ್ ಚಿತ್ರಮಂದಿರದಲ್ಲಿ ವೀಕ್ಷಣೆ ಮಾಡಿದ್ದಾರೆ.
ಗೋಧ್ರಾ ರೈಲು ದುರಂತವನ್ನು ಆಧರಿಸಿ ನಿರ್ಮಾಣಗೊಂಡಿರುವ ʼದಿ ಸಬರಮತಿ ರಿಪೋರ್ಟ್ʼ ಸಿನಿಮಾವನ್ನು ಕೇಂದ್ರ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಅವರು ಬಿಜೆಪಿ ಕಾರ್ಯಕರ್ತರ ಜೊತೆಗೆ ವೀಕ್ಷಣೆ ಮಾಡಿದ್ದು, ಕೆಲ ವರ್ಷಗಳ ಹಿಂದೆ ನಡೆದು ಹೋದ ಅಮಾನವೀಯ ಘಟನೆಯ ಹಿಂದಿರುವ ಸತ್ಯ ಹಾಗೂ ವಿಚಾರಗಳಿಗೆ ಯಾವ ರೀತಿಯಲ್ಲಿ ರಾಜಕೀಯ ಬಣ್ಣ ಬಳಿಯಲಾಯಿತು ಎಂಬುವಂತ ಕಥಾ ಹಂದರದಲ್ಲಿ ನಿರ್ಮಾಣಗೊಂಡ ಸಿನಿಮಾ ವೀಕ್ಷಣೆ ಮಾಡಿದರು.
'ದಿ ಸಬರಮತಿ ರಿಪೋರ್ಟ್' ಸಿನಿಮಾವನ್ನು ಬಹಳ ಅಚ್ಚುಕಟ್ಟಾಗಿ ಚಿತ್ರಿಸಲಾಗಿದೆ. ನಕಲಿ ನಿರೂಪಣೆಗಳ ಮೂಲಕ ಸತ್ಯವನ್ನು ಏಕೆ ಮತ್ತು ಹೇಗೆ ಮರೆಮಾಚಲಾಯಿತು ಎಂಬುವುದನ್ನು ಇದು ಒಳಗೊಂಡಿದೆ. ಈ ನಿಟ್ಟಿನಲ್ಲಿ ಪ್ರಹ್ಲಾದ್ ಜೋಶಿ ಅವರೊಂದಿಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ, ಭಾರತೀಯ ಜನತಾ ಪಕ್ಷದ ಮಹಾನಗರ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಗೂ ಯುವ ಸಮುದಾಯ ಚಿತ್ರವನ್ನು ವೀಕ್ಷಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
23/11/2024 05:42 pm