ತಿರುವನಂತಪುರಂ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಈ ಮೂಲಕ ಚೊಚ್ಚಲ ಚುನಾವಣೆಯಲ್ಲಿ ಗೆದ್ದಿರುವ ಪ್ರಿಯಾಂಕಾ ಮೊದಲ ಬಾರಿಗೆ ಸಂಸದೆ ಆಗಲಿದ್ದಾರೆ.
ಪ್ರಿಯಾಂಕಾ ಅವರು ಸುಮಾರು 3.82 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ವಿಶೇಷವೆಂದರೆ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಪ್ರಿಯಾಂಕಾ ಸಹೋದರ ರಾಹುಲ್ ಪಡೆದಿದ್ದ ಮತಗಳಿಗಿಂತಲೂ ಪ್ರಿಯಾಂಕಾ ಹೆಚ್ಚಿನ ಮತಗಳಿಂದ ಚುನಾಯಿತರಾಗಿದ್ದಾರೆ.
ಪ್ರಿಯಾಂಕಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಎಲ್‌ಡಿಎಫ್‌ನ ಸತ್ಯನ್ ಮೊಕೇರಿ ಅವರನ್ನು ಸೋಲಿಸಿದ್ದಾರೆ. ವಿಶೇಷ ಎಂದರೆ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಅವರು 1 ಲಕ್ಷ ಮತಗಳನ್ನು ಪಡೆದಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ 3.64 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಆದರೆ ರಾಯಬರೇಲಿ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅವರು, ಅಂತಿಮವಾಗಿ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿ ರಾಜೀನಾಮೆ ನೀಡಿದ್ದರು.
PublicNext
23/11/2024 06:36 pm