ಹುಬ್ಬಳ್ಳಿ: ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಸತ್ಯಕ್ಕೆ ಜಯ ಸಿಕ್ಕಂತಾಗಿದೆ. ಬಿಜೆಪಿ ಜಾತಿ ಹೆಸರಲ್ಲಿ ರಾಜಕಾರಣ ಮಾಡುವುದು, ಸುಳ್ಳು ಹೇಳುವುದನ್ನು ಬಿಡಬೇಕು ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎ.ಎಂ.ಹಿಂಡಸಗೇರಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ವಿಧಾನಸಭಾ ಉಪಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ರತಿಷ್ಠಿತ ಕಣಗಳಲ್ಲೊಂದಾದ ಶಿಗ್ಗಾಂವಿ ಕಾಂಗ್ರೆಸ್ ತೆಕ್ಕೆಗೆ ಬಂದಿದೆ. ಕಾಂಗ್ರೆಸ್ಗೆ ಸತ್ಯದ ಪರ ಗೆಲುವಾಗಿದೆ. ಬಿಜೆಪಿ ಕೋಮು ಸೌಹಾರ್ದತೆ ಹಾಳು ಮಾಡುವ ಕಾರ್ಯವನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ಜನರು ತಕ್ಕ ಪಾಠವನ್ನು ಕಲಿಸಿದ್ದಾರೆ ಎಂದರು.
ಗೆಲುವು ಸಾಧಿಸಿದ ಮೂವರು ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೇ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಎಲ್ಲ ಸಚಿವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
23/11/2024 06:57 pm