ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೊರಬ: "ಪ್ರತಿಭಾ ಕಾರಂಜಿಯಿಂದ ಮಕ್ಕಳ ಪ್ರತಿಭೆ ಅನಾವರಣ, ಉತ್ತೇಜನ ನೀಡೋಣ"

ಸೊರಬ: ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ತೀರ್ಪುಗಾರರು ನಿಷ್ಪಕ್ಷಪಾತವಾಗಿ ಪ್ರತಿಭೆಗಳನ್ನು ಗುರುತಿಸಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಕೆ. ಜಯಶೀಲ ಗೌಡ ಹೇಳಿದರು.

ಶನಿವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕು ಆಡಳಿತ, ತಾಪಂ ಹಾಗೂ ತಾಲೂಕು ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗೆ ತಕ್ಕ ಪ್ರೋತ್ಸಾಹ ನೀಡುವ ಅವಶ್ಯಕತೆ ಇದೆ. ಮಕ್ಕಳು ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಸ್ಪರ್ಧಾತ್ಮಕ ಮನೋಭಾವ ವೃದ್ಧಿಯಾಗುತ್ತದೆ. ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಾದ ಸಾಂಸ್ಕೃತಿಕ ಕಲೆಗಳ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ತಾಲೂಕು ಮಟ್ಟದಿಂದ ರಾಜ್ಯಮಟ್ಟದವರೆಗೆ ಪ್ರತಿನಿಧಿಸಲಿ ಎಂದು ಆಶಿಸಿದರು.

ತಾಪಂ ಮಾಜಿ ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ ಮಾತನಾಡಿ, ಮಕ್ಕಳನ್ನು ಸುಸಂಸ್ಕೃತ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಣದೊಂದಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ಬುದ್ದಿಮಟ್ಟವು ಹೆಚ್ಚಾಗುತ್ತದೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ತಾಲೂಕು ಜಿಲ್ಲೆಯಲ್ಲಿಯೇ ಉತ್ತಮ ಸ್ಥಾನ ಗಳಿಸಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಗಳಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಶ್ರಮ ವಹಿಸಬೇಕು ಎಂದರು.

ಕ್ಷೇತ್ರದ ಶಾಸಕರಾದ ಎಸ್. ಮಧು ಬಂಗಾರಪ್ಪ ಶಿಕ್ಷಣ ಸಚಿವರಾದ ತರುವಾಯ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಮತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸಚಿವರ ಕಾರ್ಯವೈಖರಿಯು ಶಿಕ್ಷಕರ ಮತ್ತು ನೌಕರ ವೃಂದದಲ್ಲಿ ಅತ್ಯಂತ ಸಂತಸ ಮೂಡಿಸಿದ್ದು, ಆಸಕ್ತಿಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪಾ, ಕ್ಷೇತ್ರ ಸಮಯನ್ವಯಾಧಿಕಾರಿ ದಯಾನಂದ ಕಲ್ಲೇರ್, ಜಿಪಂ ಮಾಜಿ ಸದಸ್ಯ ತಬಲಿ ಬಂಗಾರಪ್ಪ, ಕಾಲೇಜಿನ ಉಪ ಪ್ರಾಂಶುಪಾಲ ಡಿ. ಫಕೀರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್. ಗಣಪತಿ, ಶಿಕ್ಷಕರ ಸಂಘಟನೆಯ ಪ್ರಕಾಶ್ ಮಡ್ಲೂರ್, ಕುಮಾರ್, ಪಿಎಂ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ ಕೆ.ಸಿ. ಶ್ರೀಕಾಂತ್, ಹಾಲೇಶ್ ನವುಲೆ, ಶಶಿಕಲಾ, ಎಲ್. ಸತ್ಯನಾರಾಯಣ, ಶಫಿ ಆಹ್ಮದ್, ಎಚ್. ಹಾಲೇಶ್ ಮತ್ತಿತರರಿದ್ದರು.

ವರದಿ: ಮಧು ರಾಮ್ ಪಬ್ಲಿಕ್ ನೆಕ್ಸ್ಟ್ ಸೊರಬ

Edited By : Vinayak Patil
PublicNext

PublicNext

23/11/2024 07:05 pm

Cinque Terre

5.95 K

Cinque Terre

0

ಸಂಬಂಧಿತ ಸುದ್ದಿ