ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಸತಿ ನಿಲಯ, ಭೋಜನಾಲಯ ನಿರ್ಮಾಣಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಜೋಶಿ

ಧಾರವಾಡ: ಧಾರವಾಡದಲ್ಲಿ ಪೊಲೀಸ್ ಮಕ್ಕಳಿಗಾಗಿಯೇ ನಿರ್ಮಾಣವಾಗಿದ್ದ ಎನ್.ಎ.ಮುತ್ತಣ್ಣ ಸ್ಮಾರಕ ಶಾಲೆ ಬಂದ್ ಆಗುವ ಹಂತ ತಲುಪಿತ್ತು. ಆದರೆ, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಪೊಲೀಸ್ ಅಧಿಕಾರಿಗಳ ಪ್ರಯತ್ನದಿಂದ ಆ ಶಾಲೆ ಬಂದ್ ಆಗದೇ ಇಂದಿಗೂ ಕಾರ್ಯ ನಿರ್ವಹಿಸುತ್ತಿದ್ದು, ಆ ಶಾಲೆಗೆ ಮತ್ತಷ್ಟು ಬಲ ಕೊಡುವ ನಿಟ್ಟಿನಲ್ಲಿ ಶಾಲಾ ಆವರಣದಲ್ಲಿ ವಸತಿ ನಿಲಯ ಮತ್ತು ಭೋಜನಾಲಯ ನಿರ್ಮಾಣಕ್ಕೆ ಶನಿವಾರ ಭೂಮಿ ಪೂಜೆ ನೆರವೇರಿಸಲಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವಸತಿ ಶಾಲೆ ಮತ್ತು ಭೋಜನಾಲಯ ನಿರ್ಮಾಣಕ್ಕೆ ಸಿಎಸ್‌ಆರ್ ಫಂಡ್ ಅಡಿ ಅಂದಾಜು 2 ಕೋಟಿಯಷ್ಟು ಅನುದಾನ ನೀಡಿದ್ದು, ಇಂದು ಕಟ್ಟಡ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೇ ಭೂಮಿಪೂಜೆ ನೆರವೇರಿಸಿದರು.

ಈ ಸ್ಮಾರಕ ಶಾಲೆಗೆ ಇನ್ನೂ ಹೆಚ್ಚಿನ ಮಕ್ಕಳ ಸಂಖ್ಯೆ ಅಗತ್ಯವಿದೆ. ಹೊರಗಿನ ಮಕ್ಕಳ ಪ್ರವೇಶಾತಿಗೂ ಅನುಕೂಲ ಕಲ್ಪಿಸಬೇಕು. ಶಾಲೆಯ ಬೆಳವಣಿಗೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಜೊತೆಗೆ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಎನ್.ಎಚ್.ಕೋನರಡ್ಡಿ, ಮಾಜಿ ಶಾಸಕ ಅಮೃತ ದೇಸಾಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರಮಣಿ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Edited By : Ashok M
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

23/11/2024 07:29 pm

Cinque Terre

59.35 K

Cinque Terre

0

ಸಂಬಂಧಿತ ಸುದ್ದಿ