ಮುಲ್ಕಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಮುಲ್ಕಿ ಬಸ್ ನಿಲ್ದಾಣ ಹಾಗೂ ಹಳೆಯಂಗಡಿ ಜಂಕ್ಷನ್ ಬಳಿ ನಡೆಯಿತು.
ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಮಾತನಾಡಿ, ಬಿಜೆಪಿಯ ಅಪಪ್ರಚಾರಗಳಿಗೆ ಕಿವಿಗೊಡದೆ ಮತದಾರರು ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗ್ಯಾರಂಟಿ ಯೋಜನೆಗಳನ್ನು ಕೈ ಹಿಡಿದಿದ್ದು, ಚುನಾವಣೆಯಲ್ಲಿ ದಕ್ಕಿದ ಭರ್ಜರಿ ಗೆಲುವೇ ಸಾಕ್ಷಿಯಾಗಿದೆ ಎಂದರು.
ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್, ಕಾಂಗ್ರೆಸ್ ಮುಖಂಡರಾದ ಆಲ್ವಿನ್ ಪಕ್ಷಿಕೆರೆ, ಗೋಪಿನಾಥ ಬಡಂಗ, ಯೋಗೀಶ್ ಕೋಟ್ಯಾನ್, ಪುತ್ತುಬಾವ, ಬಾಲಚಂದ್ರ ಕಾಮತ್, ಅನಿಲ್ ಪೂಜಾರಿ ಸಸಿಹಿತ್ಲು, ಅಬ್ದುಲ್ ಅಜೀಜ್, ಬಶೀರ್ ಕುಳಾಯಿ, ರಕ್ಷಿತ್ ಕೊಳಚಿಕಂಬಳ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
23/11/2024 08:07 pm